ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಸಿಸಿಬಿ ತನಿಖೆ ತೀವ್ರ: ಹಿರಿಯ ಪತ್ರಕರ್ತನ ವಿಚಾರಣೆ

Edited By:

Updated on: Oct 23, 2026 | 11:31 AM

ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಸ್ಟಿಂಗ್ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಅಧಿಕಾರಿಗಳು, ಇದೀಗ ಹಿರಿಯ ಪತ್ರಕರ್ತರೋರ್ವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ನೋಟಿಸ್​​ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು, ಅಕ್ಟೋಬರ್​​ 23: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಇತ್ತೀಚೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆ ಬೆನ್ನಲ್ಲೇ ಇದೀಗ ಓರ್ವ ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದು ಸಿಸಿಬಿ ವಿಚಾರಣೆ ನಡೆಸಿದೆ. ವಿಚಾರಣೆ ಬಳಿಕ ಪತ್ರಕರ್ತನಿಗೆ ನೋಟಿಸ್ ಕೊಟ್ಟು ಕಳುಹಿಸಲಾಗಿದ್ದು, ನೋಟಿಸ್ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಪತ್ರಕರ್ತ ಅರ್ಜಿ ಹಾಕಿದ್ದಾರೆ. ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 23, 2026 11:16 AM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More