ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಯಿತಾ? ಸಭೆ ಮುಗಿಸಿ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

Edited By:

Updated on: Oct 27, 2026 | 9:08 AM

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಬ್ಬು ಬೆಳೆಗಾರರು ಮತ್ತು ಕಾರ್ಖಾನೆ ಮಾಲೀಕರೊಂದಿಗೆ ಸೋಮವಾರ ಮಧ್ಯರಾತ್ರಿವರೆಗೂ ಸುದೀರ್ಘ ಸಭೆ ನಡೆಸಿದ್ದಾರೆ. ರೈತರು, ಕಾರ್ಖಾನೆ ಮಾಲೀಕರು ಮತ್ತು ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸೌಹಾರ್ದಯುತ ಇತ್ಯರ್ಥಕ್ಕೆ ಒಪ್ಪಂದದ ಹತ್ತಿರ ತಲುಪಲಾಗಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಿದೆ.

ಬೆಳಗಾವಿ, ಅಕ್ಟೋಬರ್ 27: ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೋಮವಾರ ಮಧ್ಯರಾತ್ರಿವರೆಗೂ ರೈತ ಪ್ರತಿನಿಧಿಗಳು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸುದೀರ್ಘ ಸಭೆ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಆರಂಭವಾಗಿ ಮಧ್ಯರಾತ್ರಿ 12:30ರವರೆಗೆ ನಡೆದ ಈ ಸಭೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ರೈತ ಮುಖಂಡರು, ಸುಮಾರು 70 ಶಾಸಕರು, ಸಂಸದರು, ಒಂಬತ್ತು ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ರೈತರು ಸಮಸ್ಯೆಗಳನ್ನು ಹಂಚಿಕೊಂಡಿದ್ದು, ಕಾರ್ಖಾನೆ ಮಾಲೀಕರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ರೈತರು ಹಾಗೂ ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡಿಸಲು ಸರ್ಕಾರ ಮಧ್ಯಸ್ಥಿಕೆ ವಹಿಸಿದ್ದು, ಪ್ರಮುಖ ನಿರ್ಧಾರವೊಂದಕ್ಕೆ ಹತ್ತಿರವಾಗಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ರೈತರು ಮತ್ತು ಕಾರ್ಖಾನೆ ಮಾಲೀಕರು ನೇರವಾಗಿ ಚರ್ಚಿಸಿ ಅಂತಿಮ ನಿರ್ಧಾರವನ್ನು ಘೋಷಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಕೇಂದ್ರ ಸರ್ಕಾರದ ಬೆಂಬಲವನ್ನೂ ಕೋರಲು ಸಿದ್ಧವಿರುವುದಾಗಿ ಅವರು ತಿಳಿಸಿದ್ದಾರೆ. ರೈತರು ಮತ್ತು ಕಾರ್ಖಾನೆಗಳು ಎರಡೂ ಉಳಿಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More