ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಸ್ಥಳಕ್ಕೆ ಓಡೋಡಿ ಬಂದ ಸಚಿವ ಹೇಳಿದ್ದೇನು?
ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ಕಬ್ಬು ಬೆಳಗಾರರ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಹಂತಕ್ಕೆ ಬಂದಿದೆ. ಕಬ್ಬು ಬೆಳೆಗಾರರ ಹೋರಾಟ ರಾಷ್ಟ್ರ ಮಟ್ಟಕ್ಕೆ ತಲುಪಿದೆ ಎಂದು ಹೇಳಿದ್ದಾರೆ.
ಬೆಳಗಾವಿ, ನವೆಂಬರ್ 06: ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಜಿಲ್ಲೆಯ ಗುರ್ಲಾಪುರದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತಿದ್ದಾರೆ. ಬುಧವಾರದಂದು ಸ್ಥಳಕ್ಕೆ ಭೇಟಿ ನೀಡಿದ್ದ ಕಾನೂನು ಸಚಿವ ಎಚ್ಕೆ ಪಾಟೀಲ್ ರೈತರ ಆಹವಾಲು ಸಭೆ ಮಾಡಿದ್ದರು. ಆದರೆ ಸಂಧಾನ ವಿಫಲವಾಗಿತ್ತು. ಇಂದು ಸಚಿವ ಶಿವಾನಂದ ಪಾಟೀಲ್ ಕೂಡ ಸಂಧಾನಕ್ಕೆ ಆಗಮಿಸಿದ್ದಾರೆ. ಈ ವೇಳೆ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

