AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬೆರಕೆ ಆತಂಕ: ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ

ಕಲಬೆರಕೆ ಆತಂಕ: ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ

ವಿನಯ್​ ಕಾಶಪ್ಪನವರ್​
| Edited By: |

Updated on:Aug 27, 2026 | 5:40 PM

Share

ಕಲಬೆರಕೆ ಎಣ್ಣೆ ಮಾಫಿಯಾ ನಿಗ್ರಹಿಸಲು ಆಹಾರ ಸುರಕ್ಷತಾ ಇಲಾಖೆ ಸಮರ ಸಾರಿದೆ. ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಬ್ರೇಕ್ ಹಾಕಲು ಸಚಿವ ಯು.ಟಿ. ಖಾದರ್ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಅಧಿಕಾರಿಗಳ ಸಮಿತಿ ರಚನೆಗೆ ಸೂಚನೆ ನೀಡಲಾಗಿದ್ದು, ವರದಿ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಹೋಟೆಲ್, ಕ್ಲಬ್‌ಗಳ ಕಿಚನ್‌ ಶುಚಿತ್ವದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು, ಆಗಸ್ಟ್​​ 27: ಕಲಬೆರಕೆ ಅಡುಗೆ ಎಣ್ಣೆ ಮಾಫಿಯಾ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಸಮರ ಸಾರಿದ್ದು, ಲೂಸ್ ಅಡುಗೆ ಎಣ್ಣೆಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಿದೆ. ಕಲಬೆರಕೆ ಸಾಧ್ಯತೆಗಳು ಹೆಚ್ಚು ಇರುವುದರಿಂದ ಲೂಸ್ ಎಣ್ಣೆಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಸಚಿವ ಯು.ಟಿ. ಖಾದರ್ ಅವರು ಅಧಿಕಾರಿಗಳ ಸಮಿತಿ ರಚನೆಗೆ ಸೂಚನೆ ನೀಡಿದ್ದು, ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ನಡೆಯಲಿದೆ. ಲೂಸ್ ಎಣ್ಣೆಯ ಗುಣಮಟ್ಟ, ಮೂಲ ಮತ್ತು ಮಾರಾಟದ ಬಗ್ಗೆ ತೀವ್ರ ನಿಗಾ ಇರಿಸಲಾಗುವುದು. ಅಗ್ಗದ ಎಣ್ಣೆ ಕಲಬೆರಕೆ ಪತ್ತೆಗೆ ತಪಾಸಣೆ ನಡೆಸಲಾಗುವುದು. ಅನುಮಾನಾಸ್ಪದ ಎಣ್ಣೆ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಹೋಟೆಲ್ ಮತ್ತು ಕ್ಲಬ್‌ಗಳಲ್ಲಿನ ಅಡುಗೆಮನೆಗಳ ಶುಚಿತ್ವ ಮತ್ತು ಹೈಜೀನ್ ಬಗ್ಗೆಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇವುಗಳಿಗೆ 15 ದಿನಗಳ ಗಡುವು ನೀಡಲಾಗಿದ್ದು, ಸ್ವಚ್ಛತೆ ಕಾಪಾಡಲು ವಿಫಲರಾದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಚಿವ ಖಾದರ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 27, 2026 05:40 PM

Follow Us