ಗೃಹಲಕ್ಷ್ಮಿ ಯೋಜನೆ ಬಿಗ್‌ ಅಪ್ಡೇಟ್: ಮತ್ತೆ ಮರುಪರಿಶೀಲನೆ, ಫಲಾನುಭವಿಗಳು ಏನ್ಮಾಡ್ಬೇಕು ಗೊತ್ತಾ?

Edited By:

Updated on: Aug 31, 2026 | 1:05 PM

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಯಲು ಹಾಗೂ ಅನರ್ಹರು ಪಡೆಯುತ್ತಿದ್ದ ಮಾಸಿಕ 2,000ರೂ. ಹಣವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಹೌದು.. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಬಯೋಮೆಟ್ರಿಕ್ ಹಾಗೂ ಮುಖಚರ್ಯೆ ದೃಢೀಕರಣದ ಮೂಲಕ ಅರ್ಜಿ ಮರುಪರಿಶೀಲನೆಗೆ ಮುಂದಾಗಿದೆ.

ಬೆಂಗಳೂರು, (ಆಗಸ್ಟ್ 30): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ (gruhalakshmi scheme) ದುರ್ಬಳಕೆ ತಡೆಯಲು ಹಾಗೂ ಅನರ್ಹರು ಪಡೆಯುತ್ತಿದ್ದ ಮಾಸಿಕ 2,000ರೂ. ಹಣವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಹೌದು.. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಬಯೋಮೆಟ್ರಿಕ್ ಹಾಗೂ ಮುಖಚರ್ಯೆ ದೃಢೀಕರಣದ ಮೂಲಕ ಅರ್ಜಿ ಮರುಪರಿಶೀಲನೆಗೆ ಮುಂದಾಗಿದೆ. ಕಳೆದ ಮೂರು ವರ್ಷಗಳಲ್ಲಿ ಮೃತಪಟ್ಟವರು, ಆದಾಯ ತೆರಿಗೆ ಸಾವತಿದಾರರು ಸೇರಿದಂತೆ ಅರ್ಹರಲ್ಲದ ಅನೇಕ ಫಲಾನುಭಿಗಳ ಖಾತೆಗೆ ಈ ಯೋಜನೆತ ಹಣ ಪಾವತಿಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೀಗಾಗಿ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ದುರ್ಬಳಕೆ ತಡೆದಯ ಅರ್ಹ ಫಲಾನುಭವಿಗೆ ಯೋಜನೆಯ ಸವಲತ್ತಯ ತಲುಪಿಸುವ ಉದ್ದೇಶದೊಂದಿಗೆ ಅರ್ಜಿ ಮರುಪರಿಶೀಲನೆಗೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 30, 2026 05:52 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More