ಕರ್ನಾಟಕ ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ಬಾಕಿ ವೇತನ, ಪರಿಷ್ಕರಣೆಗೆ ಆಗ್ರಹ, ಅ. 22 ಡೆಡ್​ಲೈನ್

Edited By:

Updated on: Oct 07, 2026 | 1:49 PM

ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಬಾಕಿ ವೇತನ, ಪರಿಷ್ಕೃತ ವೇತನ ಹೆಚ್ಚಳ ಮತ್ತು ಹೈಕೋರ್ಟ್ ಆದೇಶ ಪಾಲನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಶಕ್ತಿ ಯೋಜನೆ ಬಾಕಿ ಹಣ ಪಾವತಿಸಲು ಹಾಗೂ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಅಕ್ಟೋಬರ್ 22ರ ಒಳಗಾಗಿ ಗಡುವು ನೀಡಿದೆ. ಬೇಡಿಕೆಗಳು ಈಡೇರದಿದ್ದರೆ ನೇರ ಹೋರಾಟದ ಎಚ್ಚರಿಕೆ ನೀಡಿದೆ.

ಬೆಂಗಳೂರು, ಅಕ್ಟೋಬರ್ 7: ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಈ ನಾಲ್ಕು ಸಾರಿಗೆ ನಿಗಮಗಳ ನೌಕರರ ಜಂಟಿ ಕ್ರಿಯಾ ಸಮಿತಿಯು ವೇತನ ಪರಿಷ್ಕರಣೆ ಮತ್ತು ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಮತ್ತೆ ಪ್ರತಿಭಟನೆ ನಡೆಸಿದೆ. ಹಿಂದಿನ ಸರ್ಕಾರ ನೀಡಿದ್ದ ಶೇಕಡಾ 15ರಷ್ಟು ವೇತನ ಹೆಚ್ಚಳಕ್ಕೆ ಬದಲಾಗಿ ಹಾಲಿ ಸರ್ಕಾರವು ಜಂಟಿ ಕ್ರಿಯಾ ಸಮಿತಿಯೊಂದಿಗೆ ಯಾವುದೇ ಮಾತುಕತೆ ಇಲ್ಲದೆ ಏಕಪಕ್ಷೀಯವಾಗಿ ಶೇಕಡಾ 11.5ರಷ್ಟು ಮಾತ್ರ ಹೆಚ್ಚಳ ಮಾಡಿರುವುದನ್ನು ಸಮಿತಿ ತೀವ್ರವಾಗಿ ವಿರೋಧಿಸಿದೆ. ಕೋವಿಡ್ ಸಮಯದಲ್ಲಿ ಭರವಸೆ ನೀಡಲಾಗಿದ್ದ 38 ತಿಂಗಳ ಬಾಕಿ, 26 ತಿಂಗಳ ವೇತನ ಬಾಕಿ ಹಾಗೂ 2020ರಲ್ಲಿ ನಿವೃತ್ತರಾದ ಮತ್ತು ಹಾಲಿ ನೌಕರರಿಗೆ ನೀಡಬೇಕಾದ 18 ತಿಂಗಳ ವೇತನ ಬಾಕಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನೌಕರರು ಒತ್ತಾಯಿಸಿದ್ದಾರೆ.

ಹೈಕೋರ್ಟ್ ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮಾತುಕತೆ ನಡೆಸಿ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಮಧ್ಯಂತರ ಆದೇಶ ನೀಡಿದ್ದರೂ, ಮೇ ತಿಂಗಳಿನಿಂದ ಇದುವರೆಗೂ ಯಾವುದೇ ಪಾಲನೆ ಆಗಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ. ಜಯದೇವ ರಾಜಸ್ ಅವರು ಮಾತನಾಡಿ, ಅಕ್ಟೋಬರ್ 22ರ ಒಳಗಾಗಿ ಸರ್ಕಾರವು ಬೇಡಿಕೆಗಳನ್ನು ಇತ್ಯರ್ಥಪಡಿಸದಿದ್ದರೆ, ನೇರ ಹೋರಾಟಕ್ಕೆ ಇಳಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More