KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ಜಂಟಿ ಕ್ರಿಯಾ ಸಮಿತಿ ಕೈಗೊಂಡ ನಿರ್ಧಾರವೇನು?
ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಅಂತಿಮವಾಗಿ, ಸಾರ್ವಜನಿಕರಿಗೆ ತೊಂದರೆ ಕೊಡುವುದು ಬೇಡ ಎಂಬ ಉದ್ದೇಶದಿಂದ ಸದ್ಯಕ್ಕೆ ಬಸ್ ಸಂಚಾರ ಬಂದ್ ಮಾಡದಿರಲು ನಿರ್ಧರಿಸಲಾಗಿದೆ.
ಬೆಂಗಳೂರು, (ಫೆಬ್ರವರಿ 19): ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಅಂತಿಮವಾಗಿ, ಸಾರ್ವಜನಿಕರಿಗೆ ತೊಂದರೆ ಕೊಡುವುದು ಬೇಡ ಎಂಬ ಉದ್ದೇಶದಿಂದ ಸದ್ಯಕ್ಕೆ ಬಸ್ ಸಂಚಾರ ಬಂದ್ ಮಾಡದಿರಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಸರ್ಕಾರಕ್ಕೆ ಮತ್ತೊಂದು ಡೆಡ್ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು
Latest Videos
