ಸಾರಿಗೆ ನೌಕರರ ಮುಷ್ಕರದ ಪರಿಣಾಮ: ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಕರ್ನಾಟಕದ ಹಲವೆಡೆ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗಳ ಸಂಚಾರ ಭಾಗಶಃ ಬಂದ್ ಆಗಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ ಹೆಚ್ಚಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಆಗಸ್ಟ್ 5: ಕರ್ನಾಟಕದ ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಬೆಂಗಳೂರಿನಲ್ಲಿ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯಾಗಿದೆ. ಪರಿಣಾಮವಾಗಿ ಬೆಂಗಳೂರಿನ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಜನ ದಟ್ಟಣೆಯ ವಿಡಿಯೋ ಇಲ್ಲಿದೆ.