ಸಾರಿಗೆ ನೌಕರರ ಮುಷ್ಕರ: ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಾಟ
ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರ ಮುಷ್ಕರದ ವೇಳೆ ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಬಸ್ ಸಂಚಾರ ಇರಲಿಲ್ಲ. ಇದೀಗ ಪ್ರಯಾಣಿಕರಿಗೆ ನೆರವಾಗುವ ನಿಟ್ಟಿನಲ್ಲಿ ಬಸ್ ಸಂಚಾರ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.
ಕೋಲಾರ, ಆಗಸ್ಟ್ 5: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದಾದ್ಯಂತ ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದು, ರಾಜ್ಯದ ಹಲವೆಡೆ ಕೆಎಸ್ಆರ್ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.
Latest Videos

