ಸಾರಿಗೆ ನೌಕರರ ಮುಷ್ಕರ: ಕೋಲಾರದಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಾಟ

Edited By:

Updated on: Aug 05, 2025 | 10:57 AM

ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರ ಮುಷ್ಕರದ ವೇಳೆ ಕೋಲಾರದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಬಸ್ ಸಂಚಾರ ಇರಲಿಲ್ಲ. ಇದೀಗ ಪ್ರಯಾಣಿಕರಿಗೆ ನೆರವಾಗುವ ನಿಟ್ಟಿನಲ್ಲಿ ಬಸ್ ಸಂಚಾರ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.

ಕೋಲಾರ, ಆಗಸ್ಟ್ 5: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದಾದ್ಯಂತ ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದು, ರಾಜ್ಯದ ಹಲವೆಡೆ ಕೆಎಸ್​ಆರ್​ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More