ಸಚಿವ ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಸಿಬಿಐ ಪತ್ರ
ವಾಲ್ಮೀಕಿ ಹಗರಣ ಪ್ರಕರಣದ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ (B Nagendra) ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು 5 ದಿನಗಳಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಹೋರಾಟ ಮಾಡುತ್ತಿವೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಚಿವ ಬಿ ನಾಗೇಂದ್ರಗೆ ಮತ್ತೊಂದು ಬಹುದೊಡ್ಡ ಸಂಕಷ್ಟ ಎದುರಾಗಿದೆ. ಹೌದು....ಸಚಿವ ನಾಗೇಂದ್ರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ CBI ಪತ್ರ ಬರೆದಿದೆ.
ಬೆಂಗಳೂರು, (ಆಗಸ್ಟ್ 21): ವಾಲ್ಮೀಕಿ ಹಗರಣ ಪ್ರಕರಣದ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ (B Nagendra) ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು 5 ದಿನಗಳಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಹೋರಾಟ ಮಾಡುತ್ತಿವೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಚಿವ ಬಿ ನಾಗೇಂದ್ರಗೆ ಮತ್ತೊಂದು ಬಹುದೊಡ್ಡ ಸಂಕಷ್ಟ ಎದುರಾಗಿದೆ. ಹೌದು….ಸಚಿವ ನಾಗೇಂದ್ರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ CBI ಪತ್ರ ಬರೆದಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆರೋಪ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ವಿರುದ್ಧ ಈಗಾಗಲೇ CBI ತನಿಖೆ ನಡೆಸಿದ್ದು, ಇದೀಗ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಅವರಿಗೆ ಸಿಬಿಐ ಪತ್ರ ಬರೆದಿದ್ದು, ಈ ಸಂಬಂಧ ಲೋಕಭವನ ಸಹ ಕಾನೂನು ತಜ್ಞರ ಸಲಹೆ ಪಡೆಯುತ್ತಿದೆ ಎಂದು ತಿಳಿದುಬಂದಿದೆ. ಹೀಗಾಗಿ ಯಾವ ಸಂದರ್ಭದಲ್ಲೂ ಸಹ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಬಹುದು.
