ವಾಲ್ಮೀಕಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕ ವಿಧಾನಮಂಡಲ ಅಧಿವೇಶನ ರಂಗೇರಿದ್ದು, ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ವಾಲ್ಮೀಕಿ ಹಗರಣವನ್ನೇ ಅಸ್ತ್ರವಾಗಿ ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಕೇವಲ ಸದನದಲ್ಲಿ ಮಾತ್ರವಲ್ಲದೇ ಕಲಾಪದ ಆಚೆಗೂ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ಹಗರಣವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದೆ. ಇನ್ನು ಇದೀಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.
ಬೆಂಗಳೂರು, (ಜುಲೈ 19): ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈಗಾಗಳೇ ಇಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರರನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ. ಈ ಹಗರಣವನ್ನು ಇಟ್ಟುಕೊಂಡೇ ಪ್ರತಿಪಕ್ಷ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಈಗಾಗಲೇ ಕಳೆದ ಮೂರು ದಿನಗಳಿಂದ ಮುಂಗಾರು ಅಧಿವೇಶನದಲ್ಲಿ ಈ ಹಗರಣವನ್ನು ಪ್ರಸ್ತಾಪಿಸಿದ್ದು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ. ಇನ್ನು ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದ್ದು, ವಾಮ್ಲೀಕಿ ಹಗರಣದ ಬಗ್ಗೆ ಏನೆಲ್ಲಾ ಹೇಳಲಿದ್ದಾರೆ ಎನ್ನುವುದನ್ನು ಲೈವ್ನಲ್ಲಿ ನೋಡಿ.
Latest Videos