ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನ ಮಾಲೀಕರು ಪರದಾಟ

Edited By:

Updated on: Dec 23, 2025 | 4:19 PM

ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ವಾಹನ್-4 ವ್ಯವಸ್ಥೆಯಲ್ಲಿ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ಅಪ್ಡೇಟ್ ಆಗದಿರುವ ತಾಂತ್ರಿಕ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ದಾರೆ. ಇದು ವಾಹನ ಮಾಲೀಕರಿಗೆ ಸಾರಿಗೆ ಇಲಾಖೆಯಿಂದ ಸಂಕಷ್ಟ ಎದುರಾಗಿದೆ. ತಕ್ಷಣದ ಪರಿಹಾರಕ್ಕೆ ಅವರು ಒತ್ತಾಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಡಿಸೆಂಬರ್​ 23: ರಾಜ್ಯದಲ್ಲಿ ವಾಹನಗಳ ಮಾಲೀಕರು ಪ್ರಸ್ತುತ ಸಾರಿಗೆ ಇಲಾಖೆಯ ವಾಹನ್-4 ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪರಿವಾಹನ್ ಪೋರ್ಟಲ್‌ನಲ್ಲಿ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ನವೀಕರಣಗೊಳ್ಳದಿರುವುದು ಪ್ರಮುಖ ಸಮಸ್ಯೆಯಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್‌ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ಧ್ವನಿ ಎತ್ತಿದ್ದು, ಇದು ಹಲವು ತಿಂಗಳಿಂದ ವಾಹನ ಮಾಲೀಕರಿಗೆ ತಲೆನೋವಾಗಿದೆ ಎಂದಿದ್ದಾರೆ. ಈಗಾಗಲೇ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು, ಸಚಿವರು ಮತ್ತು ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.