ನಾಳೆಯಿಂದ ಎಸ್​ಐಆರ್, ಮನೆಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

Updated on: Jun 29, 2026 | 3:43 PM

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಜೂನ್ 30ರಿಂದ ರಾಜ್ಯಾದ್ಯಂತ ಆರಂಭಗೊಳ್ಳಲಿದೆ. ಬೂತ್ ಮಟ್ಟದ ಅಧಿಕಾರಿಗಳು (BLOs) ಜುಲೈ 29ರವರೆಗೆ ಮನೆ ಮನೆಗೆ ಭೇಟಿ ನೀಡಿ ಹೊಸ ಮತದಾರರ ಸೇರ್ಪಡೆ, ಅನರ್ಹರ ಹೆಸರು ತೆಗೆದುಹಾಕುವಿಕೆ ಹಾಗೂ ಮಾಹಿತಿ ತಿದ್ದುಪಡಿಯ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಿಖರ ಮತದಾರರ ಪಟ್ಟಿ ರಚನೆ ಇದರ ಮುಖ್ಯ ಉದ್ದೇಶವಾಗಿದೆ.

ಬೆಂಗಳೂರು, ಜೂನ್ 29: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಜೂನ್ 30ರಿಂದ ಆರಂಭವಾಗಲಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ, ಬೂತ್ ಮಟ್ಟದ ಅಧಿಕಾರಿಗಳು (BLOs) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹಿಸಿ ಪರಿಷ್ಕರಿಸಲಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಪ್ರಕ್ರಿಯೆಯು ರಾಜ್ಯಾದ್ಯಂತ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ, 18 ವರ್ಷ ತುಂಬಿದ ಹೊಸ ಮತದಾರರ ಹೆಸರನ್ನು ಪಟ್ಟಿಗೆ ಸೇರಿಸಲು ಅರ್ಜಿ (ಫಾರ್ಮ್ 6) ನೀಡಲಾಗುತ್ತದೆ. ಮೃತಪಟ್ಟವರ ಹೆಸರುಗಳನ್ನು ಅಥವಾ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು (ಫಾರ್ಮ್ 7) ಅವಕಾಶವಿರುತ್ತದೆ. ಅಲ್ಲದೆ, ಮತದಾರರ ಗುರುತಿನ ಚೀಟಿಯಲ್ಲಿನ ಹೆಸರು, ವಯಸ್ಸು, ಲಿಂಗ, ವಿಳಾಸ ಅಥವಾ ಭಾವಚಿತ್ರದಂತಹ ತಪ್ಪುಗಳನ್ನು ತಿದ್ದುಪಡಿ ಮಾಡಲು (ಫಾರ್ಮ್ 8) ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಅನ್ಬು ಕುಮಾರ್ ಅವರ ಪ್ರಕಾರ, 5.54 ಕೋಟಿ ಎನ್ಯುಮರೇಶನ್ ಫಾರ್ಮ್‌ಗಳನ್ನು ಮುದ್ರಿಸಲಾಗಿದ್ದು, 1.02 ಲಕ್ಷ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ರಾಜ್ಯದಲ್ಲಿ ನಿಖರ ಮತ್ತು ಪಾರದರ್ಶಕ ಮತದಾರರ ಪಟ್ಟಿ ನಿರ್ಮಿಸುವುದು ಈ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ. ಎಸ್​ಐಆರ್ ಹೇಗೆ ನಡೆಯುತ್ತದೆ? ನೀವು ಮಾಡಬೇಕಾದದ್ದೇನು ಎಂಬ ವಿವರಣೆ ಈ ವಿಡಿಯೋದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us