150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಧಾನಸಭೆಯಲ್ಲಿ ವಿಜಯೇಂದ್ರ ಆಗ್ರಹ

ವಕ್ಫ್ ವಿಚಾರವಾಗಿ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪಕ್ಕೆ ವಿಧಾನಮಂಡಲ ಅಧಿವೇಶನದಲ್ಲೇ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದ್ದಾರೆ.

Follow us
Ganapathi Sharma
|

Updated on: Dec 16, 2024 | 11:53 AM

ಬೆಳಗಾವಿ, ಡಿಸೆಂಬರ್ 16: ವಕ್ಫ್​ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು. ತಮ್ಮ ವಿರುದ್ಧ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಿಯಾಂಕ್ ನನ್ನ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ಹಿಂದಿನ ಅಲ್ಪಸಂಖ್ಯಾತರ ಆಯೋಗದ ಹೆಸರು ಹೇಳಿ ನನ್ನ ಮೇಲೆ ಆರೋಪ‌ ಮಾಡಲಾಗಿದೆ. ವಕ್ಫ್ ಆಸ್ತಿ ದುರುಪಯೋಗ ಕುರಿತು ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ‌.ಆನಂದ್ ಅವರು ವರದಿ ಕೊಟ್ಟಿದ್ದರು. 2016ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು. ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋ ರೂ. ಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ವಿಜಯೇಂದ್ರ ಆಗ್ರಹಿಸಿದರು.

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿಎಂ ಹಿಟ್ ಅಂಡ್ ರನ್ ಮಾಡುವುದು ಬೇಡ ಎಂದು ವಿಜಯೇಂದ್ರ ಕಿಡಿ ಕಾರಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!