ವಕ್ಫ್ ವಿವಾದ: ವಿಜಯಪುರಕ್ಕೆ ಜೆಪಿಸಿ ಅಧ್ಯಕ್ಷರ ಭೇಟಿ ಬಗ್ಗೆ ಶೋಭಾ ಮಾತು
ಕರ್ನಾಟಕದಲ್ಲಿ ಭುಗಿಲೆದ್ದಿರುವ ವಕ್ಫ್ ವಿವಾದ ಸಂಬಂಧ ಸತ್ಯಾಸತ್ಯತೆ ಪರಿಶೀಲಿಸಲು, ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯಕ್ಕೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ರೈತರ ಅಹವಾಲು ಆಲಿಸಿರುವ ಅವರು, ಇನ್ನೇನು ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತುಗಳು ಇಲ್ಲಿವೆ.
ವಿಜಯಪುರ, ನವೆಂಬರ್ 7: ವಿಜಯಪುರದಲ್ಲಿ ರೈತರ ಆಸ್ತಿ ದಾಖಲೆ ಪಹಣಿಗಳಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಾಗಿರುವುದನ್ನು ಪ್ರತಿಭಟಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಕಳೆದ 2-3 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದೆ. ಈ ಮಧ್ಯೆ, ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಜಯಪುರಕ್ಕ ಭೇಟಿ ನೀಡಿ ಪ್ರತಿಭಟನಾ ನಿರತರ ಹಾಗೂ ರೈತರ ಅಹವಾಲು ಆಲಿಸಲಿದ್ದಾರೆ. ಸದ್ಯ ಜೆಪಿಸಿಗೆ ಸಲ್ಲಿಕೆ ಮಾಡಲಿರುವ ದಾಖಲೆಗಳನ್ನು ಶಾಸಕ ಯತ್ನಾಳ್ ಹಾಗೂ ಶೋಭಾ ಕರಂದ್ಲಾಜೆ ಹಾಗೂ ಇತರೆ ನಾಯಕರು ಹೊಂದಿಸಿಡುತ್ತಿದ್ದಾರೆ.
ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos