ವಕ್ಫ್ ವಿವಾದ: ವಿಜಯಪುರಕ್ಕೆ ಜೆಪಿಸಿ ಅಧ್ಯಕ್ಷರ ಭೇಟಿ ಬಗ್ಗೆ ಶೋಭಾ ಮಾತು

Edited By:

Updated on: Nov 07, 2024 | 11:30 AM

ಕರ್ನಾಟಕದಲ್ಲಿ ಭುಗಿಲೆದ್ದಿರುವ ವಕ್ಫ್ ವಿವಾದ ಸಂಬಂಧ ಸತ್ಯಾಸತ್ಯತೆ ಪರಿಶೀಲಿಸಲು, ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯಕ್ಕೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ರೈತರ ಅಹವಾಲು ಆಲಿಸಿರುವ ಅವರು, ಇನ್ನೇನು ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತುಗಳು ಇಲ್ಲಿವೆ.

ವಿಜಯಪುರ, ನವೆಂಬರ್ 7: ವಿಜಯಪುರದಲ್ಲಿ ರೈತರ ಆಸ್ತಿ ದಾಖಲೆ ಪಹಣಿಗಳಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಾಗಿರುವುದನ್ನು ಪ್ರತಿಭಟಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಕಳೆದ 2-3 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದೆ. ಈ ಮಧ್ಯೆ, ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಜಯಪುರಕ್ಕ ಭೇಟಿ ನೀಡಿ ಪ್ರತಿಭಟನಾ ನಿರತರ ಹಾಗೂ ರೈತರ ಅಹವಾಲು ಆಲಿಸಲಿದ್ದಾರೆ. ಸದ್ಯ ಜೆಪಿಸಿಗೆ ಸಲ್ಲಿಕೆ ಮಾಡಲಿರುವ‌ ದಾಖಲೆಗಳನ್ನು ಶಾಸಕ ಯತ್ನಾಳ್ ಹಾಗೂ ಶೋಭಾ ಕರಂದ್ಲಾಜೆ ಹಾಗೂ ಇತರೆ ನಾಯಕರು ಹೊಂದಿಸಿಡುತ್ತಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More