AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಭಾರೀ ಚಳಿ

Bengaluru Weather: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಭಾರೀ ಚಳಿ

ಸುಷ್ಮಾ ಚಕ್ರೆ
|

Updated on: Nov 29, 2025 | 9:01 PM

Share

Karnataka Weather Updates: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 12ರಿಂದ 14 ಡಿಗ್ರಿ ಸೆಲ್ಸಿಯಸ್​​ಗೆ ಕುಸಿದಿದೆ. ದಕ್ಷಿಣ ಒಳನಾಡಿನಲ್ಲಿ 14ರಿಂದ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ 16 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ದಿತ್ವಾ ಚಂಡಮಾರುತ ಶ್ರೀಲಂಕಾವನ್ನು ದಾಟಿ ಭಾರತದ ಕರಾವಳಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಇದೇ ವಾತವರಣ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಇದೇ ವಾತವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು, ನವೆಂಬರ್ 29: ದಿತ್ವಾ ಚಂಡಮಾರುತದ (Ditwah Cyclone) ಪರಿಣಾಮವಾಗಿ ಕರ್ನಾಟಕದಲ್ಲಿ ಚಳಿ ಹಾಗೂ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಮಂಜು, ಚಳಿ ಹೆಚ್ಚಾಗಿದ್ದು, ಇನ್ನೂ 3 ದಿನ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಹವಾಮಾನ 16 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚಳಿಗಾಲ ಮುಂದುವರಿಕೆಯಾಗಲಿದೆ. ಇಂದಿನಿಂದ 3 ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ರಾಜಧಾನಿ ಮೈ ಕೊರೆಯುವ ಚಳಿಗೆ ಬೆಂಗಳೂರಿನ ಜನರು ನಡುಗುತ್ತಿದ್ದಾರೆ. ವೀಕೆಂಡ್‌ ಮೂಡ್‌ನಲ್ಲಿದ್ದ ಬೆಂಗಳೂರಿನ ಜನರಿಗೆ ಚಳಿ ಹೆಚ್ಚಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 12ರಿಂದ 14 ಡಿಗ್ರಿ ಸೆಲ್ಸಿಯಸ್​​ಗೆ ಕುಸಿದಿದೆ. ದಕ್ಷಿಣ ಒಳನಾಡಿನಲ್ಲಿ 14ರಿಂದ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ 16 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ದಿತ್ವಾ ಚಂಡಮಾರುತ ಶ್ರೀಲಂಕಾವನ್ನು ದಾಟಿ ಭಾರತದ ಕರಾವಳಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಇದೇ ವಾತವರಣ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಇದೇ ವಾತವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ