AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ

ಗಣಪತಿ ಶರ್ಮಾ
|

Updated on: Mar 30, 2026 | 12:40 PM

Share

ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಒಟ್ಟು ಐದು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ತಾಪಮಾನದ ಕುರಿತು ವಿವರ ನೀಡಿದ್ದಾರೆ.

ಬೆಂಗಳೂರು, ಮಾರ್ಚ್ 30: ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗೆ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ ಇದೇ ಅವಧಿಯಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 39-40 ಡಿಗ್ರಿ ಸೆಲ್ಸಿಯಸ್ ತಲುಪುವ ಸಂಭವವಿದೆ. ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ 37-39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ನಿರೀಕ್ಷೆಯಿದೆ. ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More