Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​

Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​

ವಿವೇಕ ಬಿರಾದಾರ
|

Updated on: Dec 18, 2024 | 9:56 AM

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆಯ ಚಳಿಗಾಲ ಅಧಿವೇಶನದಲ್ಲಿ ಹಲವು ಮಸೂದೆಗಳು ಮಂಡನೆಯಾಗಿವೆ. ಉತ್ತರ ಕರ್ನಾಟಕದ ಸಮಸ್ಯೆಗಳು, ವಕ್ಫ್ ಬೋರ್ಡ್, 2ಎ ಮೀಸಲಾತಿ ಸೇರಿದಂತೆ ಹಲವು ವಿಷಯಗಳು ಚರ್ಚೆಗೆ ಬಂದಿವೆ. ಅಧಿವೇಶನದ 8ನೇ ದಿನಕ್ಕೆ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ. ಅನೇಕ ಸಮುದಾಯಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುತ್ತಿವೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದೆ. ಹಲವು ವಿಧೇಯಕಗಳು ಮಂಡನೆಯಾಗಿವೆ, ಕೆಲವು ಅಂಗಿಕಾರಗೊಂಡಿವೆ. ಕಳೆದ ಎರಡು ದಿನಗಳಿಂದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು, ವಕ್ಫ್​ ಬೋರ್ಡ್​​ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗುತ್ತಿವೆ. ಅಧಿವೇಶನ 8ನೇ ದಿನಕ್ಕೆ ಕಾಲಿಟ್ಟಿದ್ದು, ಸಾಲು ಸಾಲು ಪ್ರತಿಭಟನೆಗಳು ಮುಂದುವರೆದಿವೆ. 2ಎ ಮೀಸಲಾತಿ ನೀಡದಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಒಕ್ಕೂಟದಿಂದ ಪ್ರತಿಭಟನೆ ನಡೆಯಲಿದೆ.

ಗ್ರಾಚ್ಯುಟಿ ಹಣ ಬಿಡುಗಡೆಗೆ ಒತ್ತಾಯಿಸಿ ನೌಕರರ ಸಂಘ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, 49 ಅಲೆಮಾರಿ ಸಮುದಾಯಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಪರಿಶಿಷ್ಟ ಜಾತಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಅಲೆಮಾರಿ ಸಮುದಾಯದ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ವಕ್ಫ್ ಬೋರ್ಡ್ ರಚಿಸಲು ಒತ್ತಾಯಿಸಿ ಉತ್ತರ ಕರ್ನಾಟಕ ಅಂಜುಮನ್ ಇಸ್ಲಾಂ ಸಂಘ ಪ್ರತಿಭಟನೆ ನಡೆಸುತ್ತಿದೆ. ಹೀಗೆ ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ.