AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್​ಗೆ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್​ಗೆ

ರಮೇಶ್ ಬಿ. ಜವಳಗೇರಾ
|

Updated on: May 21, 2026 | 4:06 PM

Share

ಯುವ ಕಾಂಗ್ರೆಸ್ ಕಾರ್ತಕರ್ತರು, ಫ್ರೀಡಂಪಾರ್ಕ್​​ನಿಂದ ತೆರಳಿ ಲೋಕಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಇತ್ತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಸ್​​ನಲ್ಲಿ ಕರೆದೊಯ್ಯುತ್ತಿದ್ದರೆ, ಇನ್ನೊಂದೆಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್​​ನ ಹಿರಿಯ ನಾಯಕರು ಹೋಟೆಲ್​ಗೆ ತೆರಳಿದರು. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಫ್ರೀಡಂಪಾರ್ಕ್​ನಿಂದ ಶಾಂಗ್ರಿಲಾ ಹೋಟೆಲ್​ಗೆ ತೆರಳಿದರು.

ಬೆಂಗಳೂರು, (ಮೇ 21): ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಯುವ ಕಾಂಗ್ರೆಸ್ (youth Congress Protest )ಬೃಹತ್ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿತು. ಇಂದು )ಮೇ 21) ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಬೆಂಬಲಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಯುವ ಕಾಂಗ್ರೆಸ್ ಕಾರ್ತಕರ್ತರು, ಫ್ರೀಡಂಪಾರ್ಕ್​​ನಿಂದ ತೆರಳಿ ಲೋಕಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಇತ್ತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಸ್​​ನಲ್ಲಿ ಕರೆದೊಯ್ಯುತ್ತಿದ್ದರೆ, ಇನ್ನೊಂದೆಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್​​ನ ಹಿರಿಯ ನಾಯಕರು ಹೋಟೆಲ್​ಗೆ ತೆರಳಿದರು. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಫ್ರೀಡಂಪಾರ್ಕ್​ನಿಂದ ಶಾಂಗ್ರಿಲಾ ಹೋಟೆಲ್​ಗೆ ತೆರಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us