ರಾಜ್ಯದ 195 ತಾಲ್ಲೂಕುಗಳು ಬರಪೀಡಿತ, ಬರ ಪರಿಹಾರ ನಿಧಿಗಾಗಿ ಕೇಂದ್ರಕ್ಕೆ ಪತ್ರ: ಸಿದ್ದರಾಮಯ್ಯ, ಮುಖ್ಯಮಂತ್ರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಮೊದಲು ಮಹಾದಾಯಿ, ಕೃಷ್ಣಾ ಹಾಗೂ ಕಾವೇರಿ ನದಿ ನೀರು ವಿವಾದದ ಬಗ್ಗೆಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು ಅವರಿಂದ ಇನ್ನೂ ಉತ್ತರ ಬಂದಿಲ್ಲ ಎಂದು ಹೇಳಿದರು. ಬರಪರಿಹಾರ ನಿಧಿಯಿಂದ ಎಷ್ಟು ನೆರವು ಕೇಳಲಿದ್ದೀರಿ ಅಂತ ಕೇಳಿದ ಪ್ರಶ್ನೆಗೆ ಅವರು ಅದಿನ್ನೂ ಲೆಕ್ಕಾಚಾರ ಮಾಡಿಲ್ಲ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ 195 ತಾಲ್ಲೂಕುಗಳು ಬರಪೀಡಿತ ಅನ್ನೋದು ಈಗ ಅಧಿಕೃತ. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ತಾಲ್ಲೂಕುಗಳ ಸಮೀಕ್ಷೆ ನಡೆಸಿದ ಬಳಿಕ ಎಸ್ ಡಿ ಅರ್ ಎಫ್ (SDRF) ಮತ್ತು ಎನ್ ಡಿ ಆರ್ ಎಫ್ (NDRF) ನಿಯಮಾವಳಿ ಅನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಅಂತ ಘೋಷಿಸಲಾಗಿದೆ ಎಂದು ಹೇಳಿದರು. ಬರ ಪರಿಹಾರ ನಿಧಿಗಾಗಿ ಕೇಂದ್ರಕ್ಕೆ ಮನವಿಯನ್ನು ಕರ್ನಾಟಕ ಸರ್ಕಾರ ಸಲ್ಲಿಸಲಿದೆಯೇ ಎಂದು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ಜ್ಞಾಪನಾ ಪತ್ರವೊಂದನ್ನು (memorandum) ಅಲ್ಲಿಗೆ ಕಳಿಸಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಮೊದಲು ಮಹಾದಾಯಿ, ಕೃಷ್ಣಾ ಹಾಗೂ ಕಾವೇರಿ ನದಿ ನೀರು ವಿವಾದದ ಬಗ್ಗೆಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು ಅವರಿಂದ ಇನ್ನೂ ಉತ್ತರ ಬಂದಿಲ್ಲ ಎಂದು ಹೇಳಿದರು. ಬರಪರಿಹಾರ ನಿಧಿಯಿಂದ ಎಷ್ಟು ನೆರವು ಕೇಳಲಿದ್ದೀರಿ ಅಂತ ಕೇಳಿದ ಪ್ರಶ್ನೆಗೆ ಅವರು ಅದಿನ್ನೂ ಲೆಕ್ಕಾಚಾರ ಮಾಡಿಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
