AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನಪದ ಕ್ಷೇತ್ರದ 6 ಮಹಾನ್ ಸಾಧಕರಿಗೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಪ್ರಶಸ್ತಿ ಪ್ರದಾನ

ಜಾನಪದ ಕ್ಷೇತ್ರದ 6 ಮಹಾನ್ ಸಾಧಕರಿಗೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಪ್ರಶಸ್ತಿ ಪ್ರದಾನ

ಅಕ್ಷಯ್​ ಪಲ್ಲಮಜಲು​​
|

Updated on: Nov 01, 2026 | 9:47 PM

Share

ನಾಡಿನ ಸಾಧಕರನ್ನು ಗೌರವಿಸುವ 71ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಯಶಸ್ವಿಯಾಗಿ ನಡೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೊಪ್ಪಳದ ದಾವಲಸಾಬ್ ಅತ್ತಾರ, ಚಾಮರಾಜನಗರದ ಗೌರಮ್ಮ, ಗದಗಿನ ಪಾಂಡಪ್ಪ ದೇವಲಪ್ಪ ಲಮಾಣಿ ಸೇರಿದಂತೆ ಆರು ಜಾನಪದ ಕಲಾವಿದರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಇವರ ಕೊಡುಗೆ ಅಪಾರ.

ಬೆಂಗಳೂರು, ನ,1: ನಾಡಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಸಾಧಕರಿಗೆ ಗೌರವ ಸಲ್ಲಿಸುವ 71ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಬಾರಿ ಜಾನಪದ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಆರು ಗಣ್ಯ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೊಪ್ಪಳದ ದಾವಲಸಾಬ್ ಅತ್ತಾರ ಅವರಿಗೆ 2026ನೇ ಸಾಲಿನ ರಾಜ್ಯೋತ್ಸವ ಪುರಸ್ಕಾರ ದೊರೆಯಿತು. ಅವರು ಗೀಗಿಪದ ಗಾಯನದಲ್ಲಿ ನಿಸ್ಸೀಮರಾಗಿದ್ದಾರೆ. ಚಾಮರಾಜನಗರದ ಶ್ರೀಮತಿ ಗೌರಮ್ಮ ಅವರು ಶೋಭಾನೆ ಗೀತೆಗಳ ಮೂಲಕ ಜನಪದ ಕಲೆಯನ್ನು ಉಳಿಸಿ ಬೆಳೆಸಿದ್ದಾರೆ. ಗದಗ ಜಿಲ್ಲೆಯ ಪಾಂಡಪ್ಪ ದೇವಲಪ್ಪ ಲಮಾಣಿ ಅವರಿಗೆ 2023ನೇ ಸಾಲಿನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಅವರು ಲಾವಣಿ ಕಲೆಯ ಪ್ರಮುಖ ಕಲಾವಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಎ.ಆರ್. ಸತ್ಯನಾರಾಯಣ ಅವರು ಸೂತ್ರದ ಬೊಂಬೆಯಾಟ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಗೌರವಕ್ಕೆ ಪಾತ್ರರಾದರು. ರಾಯಚೂರು ಜಿಲ್ಲೆಯ ಈರಣ್ಣ ರುದ್ರಾಕ್ಷಿ ಮತ್ತು ಕೊಪ್ಪಳದ ಶಿವಲಿಂಗಪ್ಪ ಎಂ. (ವೀರಾವಿ) ಅವರು ಹಗಲುವೇಷ ಕಲೆಯ ಮೂಲಕ ಕನ್ನಡ ಜನಪದಕ್ಕೆ ನೀಡಿದ ಕೊಡುಗೆಗಾಗಿ ಪ್ರಶಸ್ತಿ ಸ್ವೀಕರಿಸಿದರು. ಈ ಸಾಧಕರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More