AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಅಕ್ಷಯ್​ ಪಲ್ಲಮಜಲು​​
|

Updated on: Mar 23, 2026 | 1:02 PM

Share

ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಮತ್ತು ಕಪ್ಪು ಮಾರುಕಟ್ಟೆ ಸಮಸ್ಯೆ ಪರಿಹರಿಸಲು ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೇಂದ್ರದಿಂದ ಹೆಚ್ಚುವರಿ 20% ಸಿಲಿಂಡರ್‌ಗಳ ಪೂರೈಕೆಗೆ ಒಪ್ಪಿಗೆ ದೊರೆತಿದೆ. ಎಲ್ಲಾ ವಾಣಿಜ್ಯ ಬಳಕೆದಾರರು, ವಿಶೇಷವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ GAIL ಕಂಪನಿಯೊಂದಿಗೆ ನೋಂದಾಯಿಸಿಕೊಳ್ಳಬೇಕು. ಇದು ಪೂರೈಕೆ ಸುಧಾರಿಸಲು ಮತ್ತು ಕಪ್ಪು ಮಾರುಕಟ್ಟೆಯನ್ನು ತಡೆಯಲು ಸಹಕಾರಿಯಾಗಿದೆ.

ಬೆಂಗಳೂರು, ಮಾ.23: ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. IOC, HP, GAIL ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ 20% ಸಿಲಿಂಡರ್‌ಗಳನ್ನು ಪೂರೈಸಲು ಒಪ್ಪಿಗೆ ನೀಡಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಆದರೆ, ಬ್ಲಾಕ್​​​ನಲ್ಲಿ ಮಾರಾಟ ಮಾಡುವುದನ್ನು ಹಾಗೂ ಅಧಿಕೃತವಲ್ಲದ ಮಾರುಕಟ್ಟೆಗೆ ಸಿಲಿಂಡರ್‌ಗಳು ಹೋಗುವುದನ್ನು ತಡೆಯಲು ಕೇಂದ್ರವು ನಿರ್ಣಯ ಕೈಗೊಂಡಿದೆ. ಅದರಂತೆ, ಎಲ್ಲಾ ವಾಣಿಜ್ಯ ಬಳಕೆದಾರರು, ಮುಖ್ಯವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ GAIL ಕಂಪನಿಯೊಂದಿಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಇಲ್ಲದಿದ್ದರೆ ಸಿಲಿಂಡರ್ ವಿತರಣೆ ಕಷ್ಟವಾಗಲಿದೆ. ಈ ಕ್ರಮದಿಂದ ಕಪ್ಪು ಮಾರುಕಟ್ಟೆಯನ್ನು ತಡೆಯಬಹುದು ಮತ್ತು ಮುಂದಿನ ದಿನಗಳಲ್ಲಿ GAIL ಪೈಪ್‌ಲೈನ್ ಮೂಲಕ ಹೆಚ್ಚಿನ ಪೂರೈಕೆಗೆ ಅವಕಾಶವಾಗಲಿದೆ. ಈ ಹೆಚ್ಚುವರಿ ಪೂರೈಕೆಯು ರಾಜ್ಯದಲ್ಲಿ ವಾಣಿಜ್ಯ ಬಳಕೆದಾರರ ಬೇಡಿಕೆಯನ್ನು ಪೂರೈಸಲು ಸಹಾಯಕವಾಗಲಿದೆ. ಸದ್ಯಕ್ಕೆ, ರಾಜ್ಯದಲ್ಲಿ ಸುಮಾರು 15,000 ರಿಂದ 16,000 ವಾಣಿಜ್ಯ ಸಿಲಿಂಡರ್‌ಗಳ ಬೇಡಿಕೆ ಇದೆ ಎಂದು ಅಂದಾಜಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More