ಸಿಎಂ ಡಿಕೆಶಿ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್: ಇಲ್ಲಿದೆ ಮಾಹಿತಿ
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ದೆಹಲಿ ಭೇಟಿ ಅಭಿವೃದ್ಧಿ ವಿಚಾರಗಳಿಗೆ ಹೊರತು ಸಂಪುಟ ವಿಸ್ತರಣೆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಗಮ ಮಂಡಳಿ ನೇಮಕದ ಭರವಸೆ ನೀಡಿದ್ದಾರೆ. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಿಸಿದ ಷರತ್ತುಗಳನ್ನು ಖಂಡಿಸಿದ್ದು, ರಾಜ್ಯದ ದೊಡ್ಡ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 22: ಸಿಎಂ ದೆಹಲಿ ಭೇಟಿ ವಿಚಾರವಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಾ. ಜಿ. ಪರಮೇಶ್ವರ್ ಸಚಿವ ಸಂಪುಟ ವಿಸ್ತರಣೆ ಊಹಾಪೋಹಗಳನ್ನು ನಿರಾಕರಿಸಿದ್ದಾರೆ. ತನಗಿರುವ ಮಾಹಿತಿಯಂತೆ ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೆಲವು ಕೇಂದ್ರ ಸಚಿವರ ಭೇಟಿಗೆ ಸಮಯ ಪಡೆದುಕೊಂಡಿದ್ದಾರೆ. ದೆಹಲಿಗೆ ಹೋಗಿರುವ ಕಾರಣ ಸಹಜವಾಗಿ ಕಾಂಗ್ರೆಸ್ ವರಿಷ್ಠರನ್ನೂ ಭೇಟಿ ಮಾಡಬಹುದು. ನಿಗಮ ಮಂಡಳಿ ವಿಚಾರವಾಗಿಯೂ ಚರ್ಚಿಸೋದಾಗಿ ಸಿಎಂ ಅದಾಗಲೇ ಹೇಳಿದ್ದಾರೆ. ಬರ ಪರಿಹಾರ ವಿಚಾರವಾಗಿ ಬಿಜೆಪಿಗರ ನಿಲುವಿನ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ದೊಡ್ಡ ಹಿತಾಸಕ್ತಿಗಳ ದೃಷ್ಟಿಯಿಂದ ಇಂತಹ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

