ಸಿಎಂ ಡಿಕೆಶಿ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್​​: ಇಲ್ಲಿದೆ ಮಾಹಿತಿ

Edited By:

Updated on: Oct 22, 2026 | 12:27 PM

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ದೆಹಲಿ ಭೇಟಿ ಅಭಿವೃದ್ಧಿ ವಿಚಾರಗಳಿಗೆ ಹೊರತು ಸಂಪುಟ ವಿಸ್ತರಣೆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಗಮ ಮಂಡಳಿ ನೇಮಕದ ಭರವಸೆ ನೀಡಿದ್ದಾರೆ. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಿಸಿದ ಷರತ್ತುಗಳನ್ನು ಖಂಡಿಸಿದ್ದು, ರಾಜ್ಯದ ದೊಡ್ಡ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 22: ಸಿಎಂ ದೆಹಲಿ ಭೇಟಿ ವಿಚಾರವಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಾ. ಜಿ. ಪರಮೇಶ್ವರ್​​ ಸಚಿವ ಸಂಪುಟ ವಿಸ್ತರಣೆ ಊಹಾಪೋಹಗಳನ್ನು ನಿರಾಕರಿಸಿದ್ದಾರೆ. ತನಗಿರುವ ಮಾಹಿತಿಯಂತೆ ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೆಲವು ಕೇಂದ್ರ ಸಚಿವರ ಭೇಟಿಗೆ ಸಮಯ ಪಡೆದುಕೊಂಡಿದ್ದಾರೆ. ದೆಹಲಿಗೆ ಹೋಗಿರುವ ಕಾರಣ ಸಹಜವಾಗಿ ಕಾಂಗ್ರೆಸ್​​ ವರಿಷ್ಠರನ್ನೂ ಭೇಟಿ ಮಾಡಬಹುದು. ನಿಗಮ ಮಂಡಳಿ ವಿಚಾರವಾಗಿಯೂ ಚರ್ಚಿಸೋದಾಗಿ ಸಿಎಂ ಅದಾಗಲೇ ಹೇಳಿದ್ದಾರೆ. ಬರ ಪರಿಹಾರ ವಿಚಾರವಾಗಿ ಬಿಜೆಪಿಗರ ನಿಲುವಿನ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ದೊಡ್ಡ ಹಿತಾಸಕ್ತಿಗಳ ದೃಷ್ಟಿಯಿಂದ ಇಂತಹ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More