AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

ಪ್ರಸನ್ನ ಗಾಂವ್ಕರ್​
| Edited By: |

Updated on: Jun 11, 2026 | 9:58 AM

Share

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮಗಳು ಜಾರಿಯಾಗಿದ್ದು, ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಒಂದು ತಿಂಗಳೊಳಗೆ ಬಯೋಮೆಟ್ರಿಕ್ ಮಾಡಿಸುವುದು ಕಡ್ಡಾಯವಾಗಿದ್ದು, ತಪ್ಪಿದರೆ ಖಾತೆಗೆ 2,000 ರೂಪಾಯಿ ಹಣ ಬರುವುದು ನಿಲ್ಲಲಿದೆ. ಮೃತಪಟ್ಟವರು ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು, ಜೂನ್​​ 11: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಹೊಸ ನಿಯಮಾವಳಿಗಳು ಜಾರಿಯಾಗುತ್ತಿವೆ. ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ ನಿಲ್ಲಲಿದೆ. ಬಯೋಮೆಟ್ರಿಕ್ ದೃಢೀಕರಣವನ್ನು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಇತರ ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೇ ಮತ್ತು ಯೋಜನೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಸಕ್ರಿಯವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More