AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಆಗಮಿಸಿದ ಕರ್ನಾಟಕದ ನೂತನ ರಾಜ್ಯಪಾಲೆ ಸುಧಾ ಯಾದವ್

ಬೆಂಗಳೂರಿಗೆ ಆಗಮಿಸಿದ ಕರ್ನಾಟಕದ ನೂತನ ರಾಜ್ಯಪಾಲೆ ಸುಧಾ ಯಾದವ್

ನವೀನ್ ಕುಮಾರ್ ಟಿ.
| Edited By: |

Updated on: Oct 15, 2026 | 10:53 PM

Share

ಬಿಜೆಪಿಯ ಹಿರಿಯ ಮಹಿಳಾ ನಾಯಕಿ, ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ಅಕ್ಟೋಬರ್ 12 ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಧಾ ಯಾದವ್ ಅವರು ನಾಳೆ (ಅಕ್ಟೋಬರ್ 16) ನೂತನ ರಾಜ್ಯಪಾಲೆಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅಕ್ಟೋಬರ್ 15 ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು, (ಅಕ್ಟೋಬರ್​​ 12): ಬಿಜೆಪಿಯ ಹಿರಿಯ ಮಹಿಳಾ ನಾಯಕಿ, ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ಅಕ್ಟೋಬರ್ 12 ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಧಾ ಯಾದವ್ ಅವರು ನಾಳೆ (ಅಕ್ಟೋಬರ್ 16) ನೂತನ ರಾಜ್ಯಪಾಲೆಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅಕ್ಟೋಬರ್ 15 ಬೆಂಗಳೂರಿಗೆ ಆಗಮಿಸಿದ್ದು, ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುಧಾ ಯಾದವ್ ಅವರನ್ನು ಡಿಸಿಎಂ ಡಾ. ಜಿ. ಪರಮೇಶ್ವರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸ್ವಾಗತಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More