ಬೆಂಗಳೂರಿಗೆ ಆಗಮಿಸಿದ ಕರ್ನಾಟಕದ ನೂತನ ರಾಜ್ಯಪಾಲೆ ಸುಧಾ ಯಾದವ್
ಬಿಜೆಪಿಯ ಹಿರಿಯ ಮಹಿಳಾ ನಾಯಕಿ, ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ಅಕ್ಟೋಬರ್ 12 ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಧಾ ಯಾದವ್ ಅವರು ನಾಳೆ (ಅಕ್ಟೋಬರ್ 16) ನೂತನ ರಾಜ್ಯಪಾಲೆಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅಕ್ಟೋಬರ್ 15 ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರು, (ಅಕ್ಟೋಬರ್ 12): ಬಿಜೆಪಿಯ ಹಿರಿಯ ಮಹಿಳಾ ನಾಯಕಿ, ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ಅಕ್ಟೋಬರ್ 12 ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಧಾ ಯಾದವ್ ಅವರು ನಾಳೆ (ಅಕ್ಟೋಬರ್ 16) ನೂತನ ರಾಜ್ಯಪಾಲೆಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅಕ್ಟೋಬರ್ 15 ಬೆಂಗಳೂರಿಗೆ ಆಗಮಿಸಿದ್ದು, ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುಧಾ ಯಾದವ್ ಅವರನ್ನು ಡಿಸಿಎಂ ಡಾ. ಜಿ. ಪರಮೇಶ್ವರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸ್ವಾಗತಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us