AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

ಗಂಗಾಧರ​ ಬ. ಸಾಬೋಜಿ
|

Updated on: Sep 17, 2026 | 8:45 PM

Share

ಕರ್ನಾಟಕ ರಾಜ್ಯ ಎಸ್​ಸಿ, ಎಸ್​ಟಿ ಪತ್ರಿಕಾ ಸಂಪಾದಕರ ಸಂಘವು 2025ನೇ ಸಾಲಿನ ವಾರ್ಷಿಕ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕೆ.ದೀಪಕ್, ಕೆ.ಬದ್ರುದ್ದೀನ್, ಗುರುಪ್ರಸಾದ್ ಕೆರಗೋಡು ಮತ್ತು ಯತಿರಾಜು ಬ್ಯಾಲಹಳ್ಳಿ ಸೇರಿದಂತೆ ಹಲವು ಗಣ್ಯರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿ ಗೌರವಿಸಿದರು.

ಬೆಂಗಳೂರು, ಸೆಪ್ಟೆಂಬರ್​ 17: ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ನಗರದ ಕಬ್ಬನ್‌ಪಾರ್ಕ್ ಆವರಣದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ 2025ನೇ ಸಾಲಿನ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಪ್ರಶಸ್ತಿಗೆ ಭಾಜನರಾದವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಮೈಸೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ‘ವಿಜಯ ಕಾಲ’ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಕೆ. ದೀಪಕ್ ಅವರಿಗೆ ಡಾ. ಅಂಬೇಡ್ಕರ್ ವಾರ್ಷಿಕ ದತ್ತಿ ಪ್ರಶಸ್ತಿ, ರಾಜ್ಯ ಮಾಹಿತಿ ಆಯೋಗದ ಆಯುಕ್ತ ಕೆ. ಬದ್ರುದ್ದೀನ್ ಅವರಿಗೆ ಬಿ. ರಾಚಯ್ಯ ದತ್ತಿ ಪ್ರಶಸ್ತಿ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಅವರಿಗೆ ಪ್ರೊ. ಬಿ. ಕೃಷ್ಣಪ್ಪ ದತ್ತಿ ಪ್ರಶಸ್ತಿ ಹಾಗೂ ಪತ್ರಕರ್ತ ಯತಿರಾಜು ಬ್ಯಾಲಹಳ್ಳಿ ಅವರಿಗೆ ಬಿ. ಬಸವಲಿಂಗಪ್ಪ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಲಾಯಿತು.

ವರದಿ: ವಿಲಾಸ್​​ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us