B Nagendra Press Meet: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಬಿ ನಾಗೇಂದ್ರ ಸುದ್ದಿಗೋಷ್ಠಿ ನೇರಪ್ರಸಾರ

B Nagendra Press Meet: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಬಿ ನಾಗೇಂದ್ರ ಸುದ್ದಿಗೋಷ್ಠಿ ನೇರಪ್ರಸಾರ

Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on:Jun 06, 2024 | 5:21 PM

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನೇ ಅಸ್ತ್ರವಾಗಿಸಿಕೊಂಡಿದ್ದ ಬಿಜೆಪಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದಿತ್ತು. ಇದೀಗ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈ ಕುರಿತಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಬೆಂಗಳೂರು, ಜೂನ್​ 06: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ (Valmiki Development Corporation scam) ಸರ್ಕಾರವನ್ನ ನಿದ್ದೆಗೆಡಿಸಿತ್ತು. ಪ್ರಕರಣದಲ್ಲಿ ಸಚಿವ ನಾಗೇಂದ್ರ (B Nagendra) ಹೆಸರು ಕೇಳಿಬಂದಿದೆ. ಹೀಗಾಗಿ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿತ್ತು. ರಾಜೀನಾಮೆ ಪಡೆಯೋಕೆ ಬಿಜೆಪಿ ಇಂದೇ ಗಡುವು ಸಹ ಕೊಟ್ಟಿತ್ತು. ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ಕೂಡ ನೀಡಿದ್ದರು. ಇದೀಗ ಬಿಜೆಪಿ ಡೆಡ್​ಲೈನ್​ನಂತೆಯೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ಮುಂದಾಗಿದ್ದಾರೆ. ಈ ಕುರಿತಾಗಿ ಬಿ.ನಾಗೇಂದ್ರ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರ ನೇರ ಪ್ರಸಾರ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 06, 2024 05:13 PM