ಮೋದಿ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿಗೆ? ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಿಯಾಕ್ಷನ್ ಇಲ್ಲಿದೆ

Rakesh Nayak Manchi

Updated on: Mar 03, 2023 | 5:05 PM

ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಸೆಳೆಯಲು ಈಗಾಗಲೇ ರಾಜ್ಯ ನಾಯಕರು ಹೈಕಮಾಂಡ್​ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಾರ್ಚ್ 12ರಂದು ಗೆಜ್ಜಲಗೆರೆ ಬಳಿ ನಡೆಯಲಿರುವ ಸಮಾವೇಶದಲ್ಲಿ ಅವರು ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರನ್ನು ಬಿಜೆಪಿಗೆ ಸೆಳೆಯಲು ಈಗಾಗಲೇ ರಾಜ್ಯ ನಾಯಕರು ಹೈಕಮಾಂಡ್​ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾಗಿಯಾಗಲಿರುವ ಗೆಜ್ಜಲಗೆರೆ ಬಳಿಯಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ (PM Modi Visit Mandya) ಅವರು ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಪ್ರಧಾನಿ ಕಾರ್ಯಕ್ರಮದಲ್ಲಿ ಯಾರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮ ಇರುವುದಿಲ್ಲ ಎಂದರು. ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಮಾತನಾಡಿದ ಜೋಶಿ, ಸೂಕ್ತ ಸಮಯದಲ್ಲಿ ನಿಮಗೆ ಎಲ್ಲಾ ವಿಷಯ ತಿಳಿಸಲಾಗತ್ತದೆ ಎಂದರು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದ್ದು, ಆ ಭಾಗದ ಕಾಂಗ್ರೆಸ್, ಜೆಡಿಎಸ್​ನ ಕೆಲ ಮುಖಂಡರಿಗೆ ಗಾಳ ಹಾಕುತ್ತಿದೆ. ಈ ಪಟ್ಟಿಯಲ್ಲಿ ಸುಮಲತಾ ಅಂಬರೀಶ್​ ಸಹ ಇದ್ದಾರೆ ಎನ್ನಲಾಗಿದೆ. ಇನ್ನು ಸುಮಲತಾ ಅಂಬರೀಶ್ ಅವರು ಬಿಜೆಪಿ ಬಾಗಿಲಲ್ಲಿ ಇದ್ದಾರೆ ಎನ್ನುವುದಕ್ಕೆ ಸ್ವತಃ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸುಳಿವು ಕೊಟ್ಟಿದ್ದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.