VIDEO: ರಾಕಿ ಭಾಯ್ ಸ್ಟೈಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ಗೆ ಕನ್ನಡಿಗನ ಎಂಟ್ರಿ
IPL 2025: ಐಪಿಎಲ್ 2025 ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.
ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ರಂಗೀನ್ ಕ್ರಿಕೆಟ್ ಟೂರ್ನಿಗಾಗಿ ಈಗಾಗಲೇ ಎಲ್ಲಾ ತಂಡಗಳು ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕನ್ನಡಿಗ ಕೂಡ ಎಂಟ್ರಿ ಕೊಟ್ಟಿದ್ದಾನೆ. ಅದು ಸಹ ರಾಕಿ ಭಾಯ್ ಸ್ಟ್ರೈಲ್ನಲ್ಲಿ ಎಂಬುದು ವಿಶೇಷ.
ಹೌದು, ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂವರು ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ. ಕರ್ನಾಟಕದ ಕ್ರಿಕೆಟಿಗರಾದ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ಮನ್ವಂತ್ ಕುಮಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದಾರೆ. ಇವರಲ್ಲಿ ಇದೀಗ ಕನ್ನಡಿಗ ಕರುಣ್ ನಾಯರ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ಅನ್ನು ಸೇರಿಕೊಂಡಿದ್ದಾರೆ.
ಕರುಣ್ ನಾಯರ್ ಎಂಟ್ರಿಯನ್ನು ರಾಕಿ ಭಾಯ್ ಸ್ಟ್ರೈಲ್ನಲ್ಲಿ ಚಿತ್ರೀಕರಿಸಲಾಗಿದ್ದು, ಇದರ ವಿಡಿಯೋವನ್ನು ಡೆಲ್ಲಿ ಕ್ಯಾಪಿಟಲ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದಲೂ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
ಐಪಿಎಲ್ 2025 ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.