VIDEO: ಕರುಣ್ ನಾಯರ್… ಹೀಗೂ ಔಟಾಗ್ತಾರಾ?
IND vs ENG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 387 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೂಡ ಮೊದಲ ಇನಿಂಗ್ಸ್ನಲ್ಲಿ 387 ರನ್ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು 192 ರನ್ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್ಗಳು ಯಶಸ್ವಿಯಾಗಿದ್ದಾರೆ. ಅದರಂತೆ 193 ರನ್ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್ಗಳಿಸಿದೆ.
ಇಂಗ್ಲೆಂಡ್ ಅಂಗಳದಲ್ಲಿ ಟೀಮ್ ಇಂಡಿಯಾದ ಅನುಭವಿ ಬ್ಯಾಟರ್ ಕರುಣ್ ನಾಯರ್ ಅವರ ಕಳಪೆ ಪ್ರದರ್ಶನ ಮುಂದುವರೆದಿದೆ. ಮೊದಲೆರಡು ಟೆಸ್ಟ್ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದ ಕರುಣ್ ಮೂರನೇ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಿತ್ತು. ಆದರೆ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲೂ ಬಿಗ್ ಇನಿಂಗ್ಸ್ ಆಡುವಲ್ಲಿ ಕರುಣ್ ನಾಯರ್ ವಿಫಲರಾಗಿದ್ದಾರೆ.
ಅದರಲ್ಲೂ ನಿರ್ಣಾಯಕವಾಗಿದ್ದ ದ್ವಿತೀಯ ಇನಿಂಗ್ಸ್ನಲ್ಲಿ ಕರುಣ್ ನಾಯರ್ (14) ವಿಕೆಟ್ ಒಪ್ಪಿಸಿದ ರೀತಿ ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಬ್ರೈಡನ್ ಕಾರ್ಸ್ ವಿಕೆಟ್ನ ಗುರಿಯಾಗಿಸಿ ಚೆಂಡೆಸೆಯುತ್ತಿದ್ದರೂ ಕರುಣ್ ಅದನ್ನು ರಕ್ಷಣಾತ್ಮಕವಾಗಿ ಆಡುವ ಪ್ರಯತ್ನಕ್ಕೆ ಕೈ ಹಾಕಿರಲಿಲ್ಲ. ಅದರಲ್ಲೂ ಕಾರ್ಸ್ ಎಸೆದ 13ನೇ ಓವರ್ನ 3ನೇ ಎಸೆತವು ನೇರವಾಗಿ ವಿಕೆಟ್ನತ್ತ ಸಾಗಿ ಬಂದಿತ್ತು. ಈ ಚೆಂಡನ್ನು ಗುರುತಿಸುವಲ್ಲಿ ಸಂಪೂರ್ಣ ಎಡವಿದ ಕರುಣ್ ಆಡದೇ ಬಿಡಲು ಮುಂದಾದರು. ಪರಿಣಾಮ ಚೆಂಡು ಪ್ಯಾಡ್ಗೆ ಬಡಿದಿದೆ.
ಇತ್ತ ಬ್ರೈಡನ್ ಕಾರ್ಸ್ ಸೇರಿದಂತೆ ಇಂಗ್ಲೆಂಡ್ ಆಟಗಾರರು ಎಲ್ಬಿಡಬ್ಲ್ಯೂಗೆ ಮನವಿ ಸಲ್ಲಿಸಿದ್ದಾರೆ. ತಕ್ಷಣವೇ ಅಂಪೈರ್ ಔಟ್ ತೀರ್ಪು ನೀಡಿದ್ದಾರೆ. ಅತ್ತ ಕ್ಲಿಯರ್ ಔಟ್ ಆಗಿದ್ದ ಕಾರಣ ನಾನ್ ಸ್ಟ್ರೈಕ್ನಲ್ಲಿದ್ದ ಕೆಎಲ್ ರಾಹುಲ್ ಕೂಡ ಡಿಆರ್ಎಸ್ ತೆಗೆದುಕೊಳ್ಳದಂತೆ ಸೂಚಿಸಿದರು. ಇದೀಗ ಕರುಣ್ ನಾಯರ್ ಅವರ ಔಟ್ ವಿಡಿಯೋ ವೈರಲ್ ಆಗಿದ್ದು, ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಅನೇಕರು ಹೀಗೂ ಔಟಾಗ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 387 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೂಡ ಮೊದಲ ಇನಿಂಗ್ಸ್ನಲ್ಲಿ 387 ರನ್ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು 192 ರನ್ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್ಗಳು ಯಶಸ್ವಿಯಾಗಿದ್ದಾರೆ.
ಅದರಂತೆ 193 ರನ್ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್ಗಳಿಸಿದೆ. ಇನ್ನು ಈ ಪಂದ್ಯದಲ್ಲಿ ಗೆಲ್ಲಲು ಟೀಮ್ ಇಂಡಿಯಾ 135 ರನ್ಗಳನ್ನು ಕಲೆಹಾಕಬೇಕಿದ್ದು, ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.