AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 24 ಮಂದಿ ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 24 ಮಂದಿ ಮೀನುಗಾರರ ರಕ್ಷಣೆ

ಅಶೋಕ್​ ಪೂಜಾರಿ
| Edited By: |

Updated on: Aug 31, 2026 | 9:02 AM

Share

Uttara Kannada news: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಅವಘಡಕ್ಕೀಡಾಗಿ ಮುಳುಗಿದೆ. ಬೋಟ್‌ನಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ರಕ್ಷಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾರವಾರ ವ್ಯಾಪ್ತಿಯಲ್ಲಿ ಆಗಾಗ ಮೀನುಗಾರಿಕಾ ಬೋಟ್​ಗಳು ಮುಳುಗಡೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕಾರವಾರ, ಆಗಸ್ಟ್ 31: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಮುಳುಗಿದ್ದು, ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಮೀನುಗಾರಿಕಾ ಬೋಟ್‌ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದನ್ನು ಗಮನಿಸಿದ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.

ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೋಟ್‌ನಲ್ಲಿದ್ದ 24 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೋಟ್‌ ಮುಳುಗಡೆಯಿಂದ ಮೀನುಗಾರಿಕಾ ಬೋಟ್‌ ಹಾಗೂ ಅದರಲ್ಲಿದ್ದ ಮೀನುಗಾರಿಕಾ ಪರಿಕರಗಳು ಸೇರಿದಂತೆ ₹80 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More