Loading video

ಆಲೂರು: ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ, ತಪ್ಪಿದ ಬಾರಿ ಅನಾಹುತ

| Updated By: Ganapathi Sharma

Updated on: Mar 25, 2025 | 11:30 AM

ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಸಂಭಾವ್ಯ ಭಾರಿ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಗ್ಯಾಸ್ ಸಿಲಿಂಡರ್‌ ತುಂಬಿದ್ದ ಲಾರಿಯೊಂದು ಬ್ರೇಕ್ ಫೇಲ್ ಆಗಿ ಮರಕ್ಕೆ ಗುದ್ದಿ, ಮುಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಸಿಲಿಂಡರ್​ಗಳು ಸೋರಿಕೆಯಾಗದೆ ಅಪಾಯ ತಪ್ಪಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ದಾರೆ.

ಕಾರವಾರ, ಮಾರ್ಚ್ 25: ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಸಂಭವಿಸಿದೆ. ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್‌ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಟ್ರಕ್​ನಲ್ಲಿರುವ ಗ್ಯಾಸ್ ಸಿಲಿಂಡರ್‌ಗಳು ಸೋರಿಕೆಯಾಗಿಲ್ಲ. ಟ್ರಕ್​ನ ಬಾಗಿಲು ಮುರಿದು ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಚಾಲಕ ವಿನಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದಾಂಡೇಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚಾಲಕ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 25, 2025 11:25 AM