ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 766E ಮೇಲೆ ಗುಡ್ಡ ಕುಸಿದಿದೆ. ನಿನ್ನೆ ರಾತ್ರಿ ಕುಸಿದ ಗುಡ್ಡದ ಮಣ್ಣು ತೆರವು ಮಾಡುವಷ್ಟರಲ್ಲಿ ಬೆಳಿಗ್ಗೆ ಮತ್ತೆ ಕುಸಿದಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ.
ಕಾರವಾರ, ಜೂನ್ 14: ನಿರಂತರ ಮಳೆಗೆ (rain) ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವಿಮನೆ ಘಟ್ಟದ ರಾಷ್ಟ್ರೀಯ ಹೆದ್ದಾರಿ 766Eನಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಮಣ್ಣು ಮತ್ತು ಮರಗಳು ಕುಸಿದು ಬಿದ್ದಿದೆ. ನಿನ್ನೆ ರಾತ್ರಿ ಕುಸಿದ ಗುಡ್ಡದ ಮಣ್ಣು ತೆರವು ಮಾಡುವಷ್ಟರಲ್ಲಿ ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಹೀಗಾಗಿ ಘಟ್ಟ ಭಾಗದಲ್ಲಿ ವಾಹನ ಸಂಚಾರಕ್ಕೆ ಆತಂಕ ಹೆಚ್ಚಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.