ಕಾರವಾರ: ಜನವಸತಿ ಪ್ರದೇಶದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಹೆಗಡೆ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಸದ್ಯ ಬೋನು ಇಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿದಿದ್ದಾರೆ. ಮತ್ತೊಂದೆಡೆ ಯಾದಗಿರಿಯಲ್ಲಿ ಮೊಸಳೆಯನ್ನು ಸೆರೆ ಹಿಡಿಯಲಾಗಿದೆ.
ಕಾರವಾರ, ನ.09: ಜನವಸತಿ ಪ್ರದೇಶದಲ್ಲಿ ಓಡಾಡುತ್ತಿದ್ದ ಚಿರತೆ (Leopard) ಸೆರೆ ಸಿಕ್ಕಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಹೆಗಡೆ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಗ್ರಾಮದ ಬಳಿ ಬೋನ್ ಇರಿಸಿದ್ದರು. ಡಿಆರ್‌ಎಫ್‌ಓ ರಾಘವೇಂದ್ರ ಹೂವಣ್ಣ ನೇತೃತ್ವದಲ್ಲಿ ಎರಡು ದಿನಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆಸಿಕ್ಕಿದೆ.
ಬೃಹತ್ ಗಾತ್ರದ ಮೊಸಳೆ ಸೆರೆ
ಯಾದಗಿರಿ ತಾಲೂಕಿನ ಕೂಡ್ಲೂರ್ ಗ್ರಾಮದ ಬಳಿಯ ರೈತನ ಜಮೀನಿಗೆ ನುಗ್ಗಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಭೀಮಾ ನದಿಯಿಂದ ರೈತನ ಜಮೀನಿಗೆ ಮೊಸಳೆ ಬಂದಿತ್ತು. ಮೊಸಳೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos