ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಎಚ್ಚರಿಕೆ ಕೊಟ್ಟ ಪೋಲಿಸ್

Edited By:

Updated on: Aug 26, 2026 | 3:11 PM

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಲಾಗಿತ್ತು. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಧ್ವಜವನ್ನು ವಶಪಡಿಸಿಕೊಂಡರು. ಮೆರವಣಿಗೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಂಡು, ಧ್ವಜ ಹಾರಿಸದಂತೆ ಎಚ್ಚರಿಕೆ ನೀಡಿದರು. ಈ ಘಟನೆಯು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಮುಂಜಾಗ್ರತಾ ಕ್ರಮವನ್ನು ಎತ್ತಿ ತೋರಿಸುತ್ತದೆ.

ಕಾರವಾರ, ಆಗಸ್ಟ್​​ 26: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳದಲ್ಲೇ ಧ್ವಜವನ್ನು ವಶಕ್ಕೆ ಪಡೆದು ಮುನ್ನೆಚ್ಚರಿಕೆ ನೀಡಿದ್ದಾರೆ. ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಪರಿಸ್ಥಿತಿಯನ್ನು ತಿಳಿಗೊಳಿಸಿದ ಪೊಲೀಸರು, ಇಂತಹ ಧ್ವಜಗಳನ್ನು ಹಾರಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More