AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ

ಅಶೋಕ್​ ಪೂಜಾರಿ
| Edited By: |

Updated on:Jul 17, 2026 | 11:03 PM

Share

ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ಮುಂಗಾರು ಮಳೆಯ ಅಬ್ಬರದ ನಡುವೆ ಸಮುದ್ರದ ಅಲೆಗಳಲ್ಲಿ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಭಾರೀ ಮಳೆಯಿಂದ ಸಮುದ್ರ ಉಕ್ಕಿ ಹರಿಯುತ್ತಿದ್ದರೂ, ಪೊಲೀಸರು ಕ್ಷಣಾರ್ಧದಲ್ಲಿ ಸ್ಪೀಡ್ ಬೋಟ್ ಮೂಲಕ ಕಾರ್ಯಾಚರಣೆ ನಡೆಸಿ, ಯುವಕನನ್ನು ಸುರಕ್ಷಿತವಾಗಿ ದಡಕ್ಕೆ ತಂದು ಮಾನವೀಯತೆ ಮೆರೆದಿದ್ದಾರೆ.

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ ತಿಳಿಯದಂತೆ ಸಮುದ್ರದ ಆಳಕ್ಕೆ ಇಳಿದಿದ್ದಾನೆ. ಅಲೆಗಳ ಅಬ್ಬರಕ್ಕೆ ಸಿಲುಕಿ ಆತ ನೀರಿನಲ್ಲಿ ಮುಳುಗುತ್ತಿರುವುದನ್ನು ತೀರದಲ್ಲಿದ್ದ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತಕ್ಷಣವೇ ಗಮನಿಸಿದ್ದಾರೆ. ಸ್ವಲ್ಪ ತಡಮಾಡಿದ್ದರೂ ಯುವಕ ಸಮುದ್ರದ ಪಾಲಾಗುತ್ತಿದ್ದನು. ಆದರೆ, ಪೊಲೀಸರು ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತಕ್ಷಣವೇ ಸ್ಪೀಡ್ ಬೋಟ್ ಮೂಲಕ ಸಮುದ್ರದ ಮಧ್ಯಕ್ಕೆ ಧಾವಿಸಿದ್ದಾರೆ. ಅಲೆಗಳ ನಡುವೆಯೂ ಚಾಣಾಕ್ಷತನದಿಂದ ಬೋಟ್ ಮುನ್ನಡೆಸಿದ ಪೊಲೀಸ್ ಸಿಬ್ಬಂದಿ, ಮುಳುಗುತ್ತಿದ್ದ ಯುವಕನನ್ನು ಸುರಕ್ಷಿತವಾಗಿ ನೀರಿನಿಂದ ಮೇಲೆತ್ತಿ ಬೋಟ್ ಒಳಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಸಮುದ್ರದ ಮಧ್ಯದಿಂದ ಸುರಕ್ಷಿತವಾಗಿ ದಡಕ್ಕೆ ತಂದು ಬಿಟ್ಟಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Jul 17, 2026 08:48 PM

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More