ಕಾರವಾರದಲ್ಲಿ ನವರಾತ್ರಿ ಸಂಭ್ರಮ: ದಾಂಡಿಯಾ, ಗರ್ಭಾ ನೃತ್ಯಗಳ ಮೂಲಕ ಸಾಂಪ್ರದಾಯಿಕ ಆಚರಣೆ

Edited By:

Updated on: Oct 18, 2026 | 9:11 AM

ಕಾರವಾರದಲ್ಲಿ ನವರಾತ್ರಿ ಸಂಭ್ರಮವು ಗರ್ಭಾ ಮತ್ತು ದಾಂಡಿಯಾ ನೃತ್ಯಗಳೊಂದಿಗೆ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ನಂದನಗದ್ದದಲ್ಲಿರುವ ಜೈ ಸಂತೋಷಿಮಾತಾ ದೇವಾಲಯದಲ್ಲಿ ಕಳೆದ 25 ವರ್ಷಗಳಿಂದ ಈ ಸಂಪ್ರದಾಯಬದ್ಧ ದಸರಾ ಉತ್ಸವ ನಡೆಯುತ್ತಿದೆ. ಜಾತಿ, ವಯಸ್ಸಿನ ಭೇದವಿಲ್ಲದೆ ಎಲ್ಲರೂ ಭಾಗವಹಿಸುವ ಈ ಉತ್ಸವವು ಕಳಶ, ಗರ್ಭಾ, ಮತ್ತು ದಾಂಡಿಯಾ ನೃತ್ಯಗಳನ್ನು ಒಳಗೊಂಡಿದೆ.

ನಾಡಿನಲ್ಲೆಲ್ಲೆಡೆ ನವರಾತ್ರಿ ಸಂಭ್ರಮ ಮನೆ ಮಾಡಿದ್ದು, ಶಾರದೆ ಸಹಿತ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನವರಾತ್ರಿ ಉತ್ಸವ ವಿಶೇಷವಾಗಿ ಜರುಗುತ್ತಿದೆ. ಇಲ್ಲಿ ದಾಂಡಿಯಾ ಸಹಿತ ಬೇರೆ ಬೇರೆ ನೃತ್ಯ ಪ್ರಕಾರಗಳನ್ನು ದೇವಿಯ ಮುಂದೆ ನೃತ್ಯ ಸೇವೆಯಾಗಿ ಸಲ್ಲಿಸಲಾಗುತ್ತದೆ. ದಾಂಡಿಯಾ ಮತ್ತು ಗರ್ಭಾ ನೃತ್ಯವು ಮೂಲತಃ ಗುಜರಾತ್ ಭಾಗದಲ್ಲಿ ಹೆಚ್ಚು ಪ್ರಸಿದ್ಧವಾಗಿದ್ದು, ಉದ್ಯೋಗ ಅರಸಿ ಬಂದ ಗುಜರಾತ್ ಮೂಲದ ಜನರು ತಮ್ಮ ಸಾಂಪ್ರದಾಯಿಕ ನೃತ್ಯವನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಂದುವರಿಸಿಕೊಂಡು ಬಂದಿದ್ದಾರೆ. ಪ್ರಮುಖವಾಗಿ ಕಾರವಾರ ನಗರದ ನಂದನಗದ್ದದಲ್ಲಿರುವ ಜೈ ಸಂತೋಷಿಮಾತಾ ದೇವಾಲಯದ ಮುಂದೆ ಸುಮಾರು 25 ವರ್ಷಗಳಿಂದ ಈ ದಾಂಡಿಯಾ ನೃತ್ಯವನ್ನು ಆಯೋಜಿಸಲಾಗುತ್ತಿದೆ.

 

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

 

Published on: Oct 18, 2026 09:08 AM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More