AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ, ಹೊಸ ಕ್ರಮಗಳು ಜಾರಿ

ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ, ಹೊಸ ಕ್ರಮಗಳು ಜಾರಿ

ಅಕ್ಷತಾ ವರ್ಕಾಡಿ
|

Updated on: Nov 15, 2026 | 11:45 AM

Share

ಕೆಎಎಸ್ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಹೊಸ ಇ ಆಯ್ಕೆ, ಇಎನ್‌ಟಿ ವೈದ್ಯರ ನಿಯೋಜನೆ, ಜಾಮ್‌ರ್‌ಗಳ ಪರಿಶೀಲನೆ, ಸಿಸಿಟಿವಿ ಕಣ್ಗಾವಲು ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಪಾರದರ್ಶಕ ಪರೀಕ್ಷೆಗೆ ಸರ್ಕಾರ ಬದ್ಧವಾಗಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುತ್ತಿರುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಈ ಬಾರಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿಂದೆ ನಡೆದ ಪರೀಕ್ಷೆಗಳಲ್ಲಿನ ಅಕ್ರಮಗಳ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖುದ್ದಾಗಿ ಹಸ್ತಕ್ಷೇಪ ಮಾಡಿ, ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳೊಂದಿಗೆ ಸಭೆ ನಡೆಸಿ, ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಹೈಟೆಕ್ ನಕಲು ತಡೆಯಲು ಇ ಎಂಬ ಹೊಸ ಆಯ್ಕೆಯನ್ನು ಪರಿಚಯಿಸಲಾಗಿದೆ. ಅಭ್ಯರ್ಥಿಗಳು ಉತ್ತರ ಗೊತ್ತಿಲ್ಲದಿದ್ದಲ್ಲಿ ಕಡ್ಡಾಯವಾಗಿ ಇ ಆಯ್ಕೆಯನ್ನು ತುಂಬಬೇಕು. ಇಲ್ಲವಾದರೆ ಋಣಾತ್ಮಕ ಅಂಕಗಳನ್ನು ಎದುರಿಸಬೇಕಾಗುತ್ತದೆ.

ಅತೀ ಸೂಕ್ಷ್ಮ ಕೇಂದ್ರಗಳಲ್ಲಿ ಬ್ಲೂಟೂತ್, ಮೈಕ್ರೋ ಇಯರ್‌ಫೋನ್ ಬಳಕೆಯನ್ನು ತಡೆಯಲು ಇಎನ್‌ಟಿ ವೈದ್ಯರನ್ನು ನಿಯೋಜಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು, ಪ್ರತಿ ಮೇಜಿಗೆ ಇಬ್ಬರು ವಿದ್ಯಾರ್ಥಿಗಳು ಹಾಗೂ ನಿರಂತರ ಸಿಸಿಟಿವಿ ಕಣ್ಗಾವಲು ಖಚಿತಪಡಿಸಿಕೊಳ್ಳಲಾಗಿದೆ. ಈ ಕ್ರಮಗಳು ಪರೀಕ್ಷೆಯ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಗುರಿ ಹೊಂದಿವೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More