ಕೆಎಎಸ್​​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ

Updated on: Apr 27, 2026 | 10:06 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸನ್ಮಾನ ಪತ್ರ ಬಿಡುಗಡೆ ಮಾಡಲಾಯಿತು. 28 ವರ್ಷಗಳ ನಂತರ ನವೀಕರಣಗೊಂಡ ಈ ಕಟ್ಟಡ ಕೆಎಎಸ್ ಅಧಿಕಾರಿಗಳ ಸೇವೆಯನ್ನು ಸ್ಮರಿಸುತ್ತದೆ.

ಬೆಂಗಳೂರು, ಏಪ್ರಿಲ್​ 27: ನಗರದ ಇನ್ಫೆಂಟ್ರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ KAS ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ಒಟ್ಟಿಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಎಎಸ್ ಅಧಿಕಾರಿಗಳಿಗೆ ಪ್ರಮೋಷನ್ ಸಂಬಂಧ 2 ಸಭೆಯಾಗಿದೆ. ಆದಷ್ಟು ಬೇಗ ಪ್ರಮೋಷನ್ ಆಗುತ್ತದೆ ಎಂದರು. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡುವ ಭರವಸೆ ನೀಡಿದ್ದಾರೆ. ಸಮಸ್ಯೆ ಹೇಳಿಕೊಂಡು ಜನ ನಿಮ್ಮ ಬಳಿ ಬರ್ತಾರೆ, ಸಮಾಧಾನದಿಂದ ಕೇಳಿ ಕೆಲಸ ಮಾಡಿದರೆ ರಾಜ್ಯಕ್ಕೂ ಕೀರ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 27, 2026 10:05 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More