ಕಾಶಿ ನನ್ನದು: ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದು, 3,880 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. 3384 ಕೋಟಿ ರೂ. ಮೌಲ್ಯದ 44 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ನಂತರ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ.ಯುಪಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಕೂಡ ಅವರೊಂದಿಗೆ ಇದ್ದರು
ವಾರಾಣಸಿ, ಏಪ್ರಿಲ್ 11: ಪ್ರಧಾನಿ ನರೇಂದ್ರ ಮೋದಿ ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದು, 3,880 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. 3384 ಕೋಟಿ ರೂ. ಮೌಲ್ಯದ 44 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ನಂತರ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ.ಯುಪಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಕೂಡ ಅವರೊಂದಿಗೆ ಇದ್ದರು.
ವಾರಾಣಸಿಯ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಕಾಶಿಯವನು, ಕಾಶಿ ನನ್ನದು ಎಂದು ಹೇಳಿದರು. ಇಂದು ಭಾರತ ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ದೇಶವಾಗಿದೆ ಎಂದು ಹೇಳಿದರು. 10 ವರ್ಷಗಳಲ್ಲಿ ಹಾಲಿನ ಉತ್ಪಾದನೆಯು ಶೇ. 65 ರಷ್ಟು ಹೆಚ್ಚಾಗಿದೆ. ಕಳೆದ 10 ವರ್ಷಗಳಲ್ಲಿ ಆಸ್ಪತ್ರೆಗಳ ಸಂಖ್ಯೆ ಹೆಚ್ಚಿರುವುದು ಮಾತ್ರವಲ್ಲದೆ, ರೋಗಿಗಳ ಘನತೆಯೂ ಹೆಚ್ಚಿದೆ ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಪಿನ್ ಲೆಜೆಂಡ್ ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
