Video: ಕಾಶಿ ವಿಶ್ವನಾಥನಿಗೆ 21 ಕ್ವಿಂಟಾಲ್ ಸಿಹಿತಿಂಡಿ ಅರ್ಪಣೆ; ವಿಡಿಯೋ ನೋಡಿ
ವಾರಣಾಸಿಯ ಕಾಶಿ ವಿಶ್ವನಾಥ ಮತ್ತು ಅನ್ನಪೂರ್ಣ ದೇವಾಲಯಗಳಲ್ಲಿ ಕಾರ್ತಿಕ ಮಾಸದ ಏಕಾದಶಿಯಂದು ಅನ್ನಕೂಟ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ವರ್ಷ, 21 ಕ್ವಿಂಟಾಲ್ ಸಿಹಿತಿಂಡಿಗಳು, ಲಡ್ಡುಗಳು ಮತ್ತು ವಿವಿಧ ಭಕ್ಷ್ಯಗಳನ್ನು ನೈವೇದ್ಯವಾಗಿ ಅರ್ಪಿಸಲಾಯಿತು, ಇದು ಹಿಂದೆಂದೂ ಕಂಡಿರದ ಸಮರ್ಪಣೆಯಾಗಿದೆ. ಈ ಅದ್ದೂರಿ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮತ್ತು ಅನ್ನಪೂರ್ಣ ದೇವಾಲಯಗಳಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಶುಕ್ಲ ಪಕ್ಷದ ಏಕಾದಶಿಯಂದು ಅನ್ನಕೂಟ ಹಬ್ಬವನ್ನು ಆಚರಿಸಲಾಗುತ್ತದೆ. ಈ ಆಚರಣೆಗಳ ಭಾಗವಾಗಿ ಈ ವರ್ಷ, ದೇವಾಲಯಗಳಲ್ಲಿ ಹಿಂದೆಂದೂ ಕಾಣದಷ್ಟು ಸಿಹಿತಿಂಡಿ, ಲಡ್ಡುಗಳು ಮತ್ತು ರುಚಿಕರವಾದ ಭಕ್ಷ್ಯಗಳನ್ನು ನೈವೇದ್ಯವಾಗಿ ಅರ್ಪಿಸಲಾಯಿತು. ಕಾಶಿ ವಿಶ್ವನಾಥನಿಗೆ ಸರಿ ಸುಮಾರು 21 ಕ್ವಿಂಟಾಲ್ ಸಿಹಿತಿಂಡಿಗಳನ್ನು ಅರ್ಪಿಸಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

