ಹುಬ್ಬಳ್ಳಿಯಲ್ಲಿ ದರ್ಶನ್-ಸಿದ್ದರಾಮಯ್ಯ ಹವಾ: ‘ಕಾಟೇರ’ ಟ್ರೈಲರ್ ಲಾಂಚ್ ಲೈವ್ ಇಲ್ಲಿ ನೋಡಿ

Updated on: Dec 16, 2023 | 7:01 PM

Katera: ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ಟ್ರೈಲರ್ ಲಾಂಚ್ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ.

ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ನಿಗದಿಯಾಗಿದೆ. ಸಿನಿಮಾದ ಟ್ರೈಲರ್ ಲಾಂಚ್ ಇಂದು ಅದ್ಧೂರಿಯಾಗಿ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಅತಿಥಿಯಾಗಿ ಭಾಗವಹಿಸುತ್ತಿರುವುದು ವಿಶೇಷ. ದರ್ಶನ್, ತಮ್ಮ ಸಿನಿಮಾದ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದಲ್ಲಿ ಹಮ್ಮಿಕೊಳ್ಳುವುದು ಮಾಮೂಲು. ಈ ‘ಕಾಟೇರ’ ಸಿನಿಮಾಕ್ಕೆ ಹುಬ್ಬಳ್ಳಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಟ ದರ್ಶನ್, ನಟಿ ರಾಧನಾ, ಹಿರಿಯ ನಟಿ ಮಾಲಾಶ್ರೀ, ತಾರಾ, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸಧೀರ್ ಸೇರಿದಂತೆ ಚಿತ್ರತಂಡದ ಇನ್ನೂ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More