ಕಥುವಾ ಸಿಐಎಸ್‌ಎಫ್ ಕ್ಯಾಂಪ್‌ನಲ್ಲಿ ನೆತ್ತರ ಕೋಡಿ: ಡ್ಯೂಟಿ ಜಗಳಕ್ಕೆ ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ
ಜಮ್ಮು ಕಾಶ್ಮೀರದ ಕಥುವಾದಲ್ಲಿ ಸಿಐಎಸ್‌ಎಫ್ ಜವಾನ ಅವಧೇಶ್ ಕುಮಾರ್ ತನ್ನ ನಾಲ್ವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ ಕರ್ತವ್ಯ ಬದಲಾಯಿಸುವಾಗ ನಡೆದ ವಾಗ್ವಾದವೇ ಈ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಅಸಿಸ್ಟೆಂಟ್ ಕಮಾಂಡೆಂಟ್ ಸೇರಿದಂತೆ ನಾಲ್ವರು ಯೋಧರು ಮೃತಪಟ್ಟಿದ್ದು, ಆರೋಪಿಯನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆ ಕುರಿತು ಸಿಐಎಸ್‌ಎಫ್ ತನಿಖೆಗೆ ಆದೇಶಿಸಿದೆ.
ಶ್ರೀನಗರ, ಸೆಪ್ಟೆಂಬರ್ 30: ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಇಲ್ಲಿನ ಸಿಐಎಸ್‌ಎಫ್ ಕ್ಯಾಂಪ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡಿನ ದಾಳಿ ನಡೆಸಿ ನಾಲ್ವರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿದ್ದಾರೆ. ಮೃತಪಟ್ಟವರಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಯ ಅಧಿಕಾರಿಯೂ ಸೇರಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿಯನ್ನು ಅವಧೇಶ್ ಕುಮಾರ್ ಎಂದು ಗುರುತಿಸಲಾಗಿದೆ.
ಘಟನೆ ಡ್ಯೂಟಿ ಬದಲಾಯಿಸುವ ಸಂದರ್ಭದಲ್ಲಿ ನಡೆದಿದ್ದು, ಯೋಧರ ನಡುವೆ ವಾಗ್ವಾದ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವಾಗ್ವಾದವೇ ಗುಂಡಿನ ದಾಳಿಗೆ ಕಾರಣವೆಂದು ಶಂಕಿಸಲಾಗಿದೆ. 2009ರ ಬ್ಯಾಚ್‌ನ ಯೋಧ ಅವಧೇಶ್ ಕುಮಾರ್ ಈ ಕೃತ್ಯ ಎಸಗಿದ್ದಾನೆ. ಆರೋಪಿ ಅವಧೇಶ್ ಕುಮಾರ್‌ನನ್ನು ಕೂಡಲೇ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಸಿಐಎಸ್‌ಎಫ್ ಅಧಿಕಾರಿಗಳು ಈ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಸಣ್ಣ ಮಾತಿನ ಚಕಮಕಿಯೇ ಈ ದೊಡ್ಡ ದುರಂತಕ್ಕೆ ಕಾರಣವಾಯಿತೇ ಅಥವಾ ಬೇರೆ ಯಾವುದೇ ಉದ್ದೇಶವಿದೆಯೇ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಈ ಘಟನೆಯು ಸೇನಾ ವಲಯದಲ್ಲಿ ಆತಂಕ ಮೂಡಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

