ಕಥುವಾ ಸಿಐಎಸ್‌ಎಫ್ ಕ್ಯಾಂಪ್‌ನಲ್ಲಿ ನೆತ್ತರ ಕೋಡಿ: ಡ್ಯೂಟಿ ಜಗಳಕ್ಕೆ ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ

Updated on: Sep 30, 2026 | 7:10 AM

ಜಮ್ಮು ಕಾಶ್ಮೀರದ ಕಥುವಾದಲ್ಲಿ ಸಿಐಎಸ್‌ಎಫ್ ಜವಾನ ಅವಧೇಶ್ ಕುಮಾರ್ ತನ್ನ ನಾಲ್ವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ ಕರ್ತವ್ಯ ಬದಲಾಯಿಸುವಾಗ ನಡೆದ ವಾಗ್ವಾದವೇ ಈ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಅಸಿಸ್ಟೆಂಟ್ ಕಮಾಂಡೆಂಟ್ ಸೇರಿದಂತೆ ನಾಲ್ವರು ಯೋಧರು ಮೃತಪಟ್ಟಿದ್ದು, ಆರೋಪಿಯನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆ ಕುರಿತು ಸಿಐಎಸ್‌ಎಫ್ ತನಿಖೆಗೆ ಆದೇಶಿಸಿದೆ.

ಶ್ರೀನಗರ, ಸೆಪ್ಟೆಂಬರ್ 30: ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಇಲ್ಲಿನ ಸಿಐಎಸ್‌ಎಫ್ ಕ್ಯಾಂಪ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡಿನ ದಾಳಿ ನಡೆಸಿ ನಾಲ್ವರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿದ್ದಾರೆ. ಮೃತಪಟ್ಟವರಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಯ ಅಧಿಕಾರಿಯೂ ಸೇರಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿಯನ್ನು ಅವಧೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ಘಟನೆ ಡ್ಯೂಟಿ ಬದಲಾಯಿಸುವ ಸಂದರ್ಭದಲ್ಲಿ ನಡೆದಿದ್ದು, ಯೋಧರ ನಡುವೆ ವಾಗ್ವಾದ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವಾಗ್ವಾದವೇ ಗುಂಡಿನ ದಾಳಿಗೆ ಕಾರಣವೆಂದು ಶಂಕಿಸಲಾಗಿದೆ. 2009ರ ಬ್ಯಾಚ್‌ನ ಯೋಧ ಅವಧೇಶ್ ಕುಮಾರ್ ಈ ಕೃತ್ಯ ಎಸಗಿದ್ದಾನೆ. ಆರೋಪಿ ಅವಧೇಶ್ ಕುಮಾರ್‌ನನ್ನು ಕೂಡಲೇ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಸಿಐಎಸ್‌ಎಫ್ ಅಧಿಕಾರಿಗಳು ಈ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಸಣ್ಣ ಮಾತಿನ ಚಕಮಕಿಯೇ ಈ ದೊಡ್ಡ ದುರಂತಕ್ಕೆ ಕಾರಣವಾಯಿತೇ ಅಥವಾ ಬೇರೆ ಯಾವುದೇ ಉದ್ದೇಶವಿದೆಯೇ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಈ ಘಟನೆಯು ಸೇನಾ ವಲಯದಲ್ಲಿ ಆತಂಕ ಮೂಡಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More