‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್

Updated on: Feb 24, 2025 | 4:22 PM

ಮಹಾಕುಂಭಮೇಳದಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ನಟಿ ಕತ್ರಿನಾ ಕೈಫ್ ಕೂಡ ಖುಷಿಯಿಂದ ಪಾಲ್ಗೊಂಡಿದ್ದಾರೆ. ಪ್ರಯಾಗ್​ರಾಜ್​ಗೆ ಬಂದ ಕೂಡಲೇ ಅವರು ಸ್ವಾಮಿಜಿ ಆಶೀರ್ವಾದ ಪಡೆದಿದ್ದಾರೆ. ವಿಕ್ಕಿ ಕೌಶಲ್ ಜೊತೆ ಮದುವೆ ಆದ ಬಳಿಕ ಕತ್ರಿನಾ ಕೈಫ್ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದೆ.

ಖ್ಯಾತ ನಟಿ ಕತ್ರಿನಾ ಕೈಫ್ ಅವರು ಪ್ರಯಾಗ್​ರಾಜ್​ಗೆ ತೆರಳಿದ್ದಾರೆ. ಮಹಾಕುಂಭಮೇಳದಲ್ಲಿ ಅವರು ಭಾಗಿಯಾಗುತ್ತಿದ್ದಾರೆ. ‘ಈ ಬಾರಿ ಇಲ್ಲಿಗೆ ಬಂದಿರುವ ನಾನು ಪುಣ್ಯವಂತೆ. ತುಂಬ ಖುಷಿ ಆಗುತ್ತಿದೆ. ಇದು ಬಹಳ ಸುಂದರವಾದ ಸ್ಥಳ. ಈಗ ನಾನು ಸ್ವಾಮಿಜಿ ಜೊತೆ ಇದ್ದೇನೆ. ಅವರ ಆಶೀರ್ವಾದ ಪಡೆದಿದ್ದೇನೆ. ಕುಂಭಮೇಳದ ಅನುಭವ ಪಡೆಯಲು ಈಗಷ್ಟೇ ಆರಂಭಿಸಿದ್ದೇನೆ’ ಎಂದು ಕತ್ರಿನಾ ಕೈಫ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.
Published on: Feb 24, 2025 04:20 PM
Loading...
Unable to load recommendations.
Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More