ಅತ್ತೆಯ ಜೊತೆ ಬಂದು ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ನಟಿ ಕತ್ರಿನಾ ಕೈಫ್
ಪ್ರಯಾಗ್ರಾಜ್ಗೆ ಬಂದಿರುವ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಅತ್ತೆ ವೀಣಾ ಕೌಶಲ್ ಜೊತೆ ಪುಣ್ಯಸ್ನಾನ ಮಾಡಿದ್ದಾರೆ. ಇದಕ್ಕೂ ಮುನ್ನ ಅವರು ಸ್ವಾಮಿಜಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಕತ್ರಿನಾ ಕೈಫ್ ಅವರು ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಪುಣ್ಯಸ್ನಾನದ ವಿಡಿಯೋ ಇಲ್ಲಿದೆ.
ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಇಂದು (ಫೆಬ್ರವರಿ 24) ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಅವರಿಗೆ ಅತ್ತೆ ವೀಣಾ ಕೌಶಲ್ ಕೂಡ ಸಾಥ್ ನೀಡಿದ್ದಾರೆ. ಕುಂಭಮೇಳದಲ್ಲಿ ಭಾಗಿಯಾಗಿದ್ದಕ್ಕೆ ಕತ್ರಿನಾ ಕೈಫ್ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಕತ್ರಿನಾ ಕೈಫ್ ಪತಿ, ಬಾಲಿವುಡ್ ನಟ ವಿಕ್ಕಿ ಕೌಶಲ್ ಕೂಡ ಕುಂಭಮೇಳಕ್ಕೆ ಬಂದಿದ್ದರು. ಅವರು ನಟಿಸಿದ ‘ಛಾವ’ ಸಿನಿಮಾ ಸೂಪರ್ ಹಿಟ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.